Headlines

‘ಜೈಲರ್ 2’ ಸೆಟ್​​​ನಲ್ಲಿ ಭೀಕರ ಅವಘಡ; ತಂಡದ ಸಿಬ್ಬಂದಿ ಸಾವು – Kannada News | Jailer 2 Set Tragedy: Crew Member Dies From Electrocution; Shivanna’s Role and Release Info

ಎಷ್ಟೇ ಮುನ್ನೆಚ್ಚರಿಕೆ ತೆಗೆದುಕೊಂಡರೂ ಸಿನಿಮಾ ಸೆಟ್​​​ನಲ್ಲಿ ಸಂಭವಿಸುವ ಅವಘಡಗಳು ಕಡಿಮೆ ಆಗೋದಿಲ್ಲ. ಈಗ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದ (Jailer 2 Movie) ಸೆಟ್‌ನಲ್ಲಿ ಭೀಕರ ಅವಘಡ ಸಂಭವಿಸಿದೆ. ಚಿತ್ರದ ಕಲಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ಕಾರ್ತಿಕೇಯನ್ ಎಂಬ ಯುವಕ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ. ಇದು ಇಡೀ ತಂಡವನ್ನು ಶಾಕ್​​ಗೆ ತಳ್ಳಿದೆ.

1. ಜೈಲರ್ 2 ಸೆಟ್​​​ನಲ್ಲಿ ಅವಘಢ

2. ಯುವ ಆರ್ಟ್ ಕಲಾವಿದನ ಸಾವು

3. ವಿದ್ಯುತ್ ತಂತಿ ತಾಗಿ ಸಾವು

ಚೆನ್ನೈನ ಪಣಯೂರ್‌ನಲ್ಲಿರುವ ಖಾಸಗಿ ಸ್ಟುಡಿಯೋವೊಂದರಲ್ಲಿ ಚಿತ್ರದ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದವು. ಮನೆಯ ಮಾದರಿಯ ಸೆಟ್ ನಿರ್ಮಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಾಗಿ ಕಾರ್ತಿಕೇಯನ್‌ಗೆ ತೀವ್ರವಾಗಿ ಶಾಕ್ ಹೊಡೆದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು. ಈ ಕುರಿತು ಕಾನತ್ತೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕನ್ನಡಿಗರಿಗೆ ಈ ಸಿನಿಮಾ ಕೇವಲ ರಜನಿಕಾಂತ್ ಚಿತ್ರವಲ್ಲ, ಬದಲಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಸಿನಿಮಾ ಕೂಡ ಹೌದು. ‘ಜೈಲರ್’ ಮೊದಲ ಭಾಗದಲ್ಲಿ ಶಿವಣ್ಣ ಅವರ ಅತಿಥಿ ಪಾತ್ರ ಇಡೀ ಸಿನಿಮಾಕ್ಕೆ ಒಂದು ದೊಡ್ಡ ಮೈಲೇಜ್ ನೀಡಿತ್ತು. ಥಿಯೇಟರ್‌ನಲ್ಲಿ ಶಿವಣ್ಣನ ಎಂಟ್ರಿಗೆ ಸಿಕ್ಕ ರೆಸ್ಪಾನ್ಸ್ ನೋಡಿ ಚಿತ್ರತಂಡ ಬೆರಗಾಗಿತ್ತು. ಹೀಗಾಗಿ, ‘ಜೈಲರ್ 2’ ಚಿತ್ರದಲ್ಲೂ ಶಿವಣ್ಣ ಅವರ ಪಾತ್ರ ಮುಂದುವರಿಯಲಿದ್ದು, ಸೀಕ್ವೆಲ್‌ನಲ್ಲಿ ಅವರ ಪಾತ್ರ ಇನ್ನಷ್ಟು ಹೈಲೈಟ್ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗ ಸಂಭವಿಸಿದ ಈ ಸಾವು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

ಇದನ್ನೂ ಓದಿ: ‘ಜೈಲರ್ 2’ ಬಿಡುಗಡೆಗೂ ಮುನ್ನವೇ 160 ಕೋಟಿ ರೂಪಾಯಿ ಒಟಿಟಿ ಡೀಲ್?

ಇತ್ತೀಚಿನ ವರದಿಗಳ ಪ್ರಕಾರ ‘ಜೈಲರ್ 2’ ಸಿನಿಮಾ ಆಗಸ್ಟ್ ಅಥವಾ ಸೆಪ್ಟೆಂಬರ್​​ನಲ್ಲಿ ತೆರೆಗೆ ಬರುವ ಸಾಧ್ಯತೆ ಇದೆಯಂತೆ. ಸನ್ ಪಿಕ್ಚರ್ಸ್ ಸಂಸ್ಥೆಯು ಶೀಘ್ರದಲ್ಲೇ ರಿಲೀಸ್ ದಿನಾಂಕವನ್ನು ಘೋಷಿಸುವ ನಿರೀಕ್ಷೆಯಿದೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಸಿನಿಮಾದಲ್ಲಿ ರಮ್ಯಾ ಕೃಷ್ಣನ್, ಯೋಗಿ ಬಾಬು ಮೊದಲಾದವರು ನಟಿಸುತ್ತಿದ್ದಾರೆ. ಮೊದಲ ಭಾಗವು ಜಾಗತಿಕವಾಗಿ 600 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಅಬ್ಬರಿಸಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *