ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ ತೋರಿಸಿದ ಪೊಲೀಸ್ರು – Kannada News | Sidlaghatta Civic Official Threat Case: lathi charge On Rajeev Gowda Fans for Tries To Stop Police vehicle

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಿ ಶಿಡ್ಲಘಟ್ಟ ಜೆಎಂಎಫ್​ಸಿ ಕೋರ್ಟ್​ ಆದೇಶ ಹೊರಡಿಸಿದೆ. ಇನ್ನು ಆರೋಪಿ ರಾಜೀವ್ ಗೌಡನನ್ನು ಕೋರ್ಟ್ ನಿಂದ ಜೈಲಿಗೆ ಕರೆದೊಯ್ಯುವ ಸಂದರ್ಭದಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ. ಹೌದು…ರಾಜೀವ್ ಗೌಡನನ್ನ ಜೈಲಿಗೆ ಕರೆದೊಯ್ಯುತ್ತಿದ್ದ ವಾಹನವನ್ನು ಕೋರ್ಟ್​​ ಬಳಿ ಅಡ್ಡಹಾಕಿ ಜೈಕಾರಕ್ಕೆ ಯತ್ನಿಸಿದ್ದಾರೆ. ಬಳಿಕ ಪೊಲೀಸರು ರಾಜೀವ್ ಗೌಡನ ಲಾಠಿ ರುಚಿ ತೋರಿಸಿ ಗುಂಪು ಚದುರಿಸಿದರು. ಬಳಿಕ ಜೈಲಿಗೆ ಕರೆದೊಯ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *