Headlines

ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ – Kannada News | Vijayalakshmi Holds Discussions with Darshan Thoogudeepa in Parappana Agrahara Jail for More Than 1 Hour

ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಅವರಿಗೆ ಜಾಮೀನು ಸಿಗದ ಕಾರಣ ಹಲವು ತಿಂಗಳಿಂದ ಜೈಲುವಾಸ ಅನುಭವಿಸುತ್ತಿದ್​ದಾರೆ. ಅವರನ್ನು ಭೇಟಿ ಮಾಡಲು ಪತ್ನಿ ವಿಜಯಲಕ್ಷ್ಮಿ ಅವರು ಆಗಾಗ ಜೈಲಿಗೆ ಬರುತ್ತಿದ್ದಾರೆ. ಇಂದು (ಜುಲೈ 31) ಕೂಡ ಅವರು ಪರಪ್ಪನ ಅಗ್ರಹಾರಕ್ಕೆ ಬಂದಿದ್ದಾರೆ. ಈ ಬಾರಿ ಅವರು ಒಂದು ಗಂಟೆಗೂ ಹೆಚ್ಚು ಕಾಲ ದರ್ಶನ್ (Darshan) ಜೊತೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಸಂಜೆ 4 ಗಂಟೆಗೆ ಜೈಲಿನ ಒಳಗೆ ಹೋಗಿದ್ದ ವಿಜಯಲಕ್ಷ್ಮಿ ಅವರು 5.30ಕ್ಕೆ ವಾಪಸ್ ಬಂದರು. ಇತ್ತೀಚೆಗಷ್ಟೇ ನಟ ಧನ್ವೀರ್ ಅವರು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದಿದ್ದರು. ದರ್ಶನ್ ಕುಟುಂಬ ಮತ್ತು ಧನ್ವೀರ್ ನಡುವೆ ವೈಮನಸ್ಸು ಮೂಡಿತ್ತು ಎಂಬ ಸುದ್ದಿ ಕೂಡ ಕೇಳಿಬಂದಿತ್ತು. ಅದರ ಬೆನ್ನಲ್ಲೇ ಧನ್ವೀರ್ ಅವರು ಜೈಲಿಗೆ ಬಂದಿದ್ದು ಎಲ್ಲರ ಅಚ್ಚರಿಗೆ ಕಾರಣ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *