ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು – Kannada News | Renukaswamy Murder Case: Pavithra Gowda Skips Hearing Due To Illness, Court Orders Treatment  

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್ ಗ್ಯಾಂಗ್‌ನ ಪ್ರಮುಖ ಆರೋಪಿ ಪವಿತ್ರಾಗೌಡ ಅನಾರೋಗ್ಯದ ಕಾರಣದಿಂದ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಬೇಕಿದ್ದ ವಿಚಾರಣೆಗೆ ಅವರು ಹಾಜರಾಗಿಲ್ಲ. ಪವಿತ್ರಾಗೌಡ ಅವರಿಗೆ ಜ್ವರ ಬಂದಿದ್ದು, ರಕ್ತದೊತ್ತಡ (ಬಿಪಿ) ಕೂಡ ಕಡಿಮೆಯಾಗಿದೆ ಎಂದು ಮಹಿಳಾ ಬ್ಯಾರಕ್ ಅಧಿಕಾರಿಗಳು ನ್ಯಾಯಾಧೀಶರಿಗೆ ಮಾಹಿತಿ ನೀಡಿದ್ದಾರೆ.

ಪವಿತ್ರಾಗೌಡ ಅವರ ಆರೋಗ್ಯ ಸ್ಥಿತಿಯ ಬಗ್ಗೆ ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರಿದ್ದ ನ್ಯಾಯಪೀಠ ತೀವ್ರ ಕಳಕಳಿ ವ್ಯಕ್ತಪಡಿಸಿದೆ. ಜೈಲಿನ ಆಸ್ಪತ್ರೆಯಲ್ಲಿ ಈಗಾಗಲೇ ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂದು ಜೈಲು ಅಧಿಕಾರಿಗಳು ಕೋರ್ಟ್‌ಗೆ ತಿಳಿಸಿದ್ದಾರೆ. ಇದೇ ವೇಳೆ ಪವಿತ್ರಾಗೌಡ ಪರ ವಕೀಲರು ಸೂಕ್ತ ವೈದ್ಯಕೀಯ ಸೌಲಭ್ಯ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಚಿಕಿತ್ಸೆಯನ್ನು ತಕ್ಷಣವೇ ಒದಗಿಸುವಂತೆ ಜೈಲು ಅಧೀಕ್ಷಕರಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ, ಪವಿತ್ರಾಗೌಡ ಅವರು ಸಂಪೂರ್ಣವಾಗಿ ಚೇತರಿಸಿಕೊಂಡು ಹುಷಾರಾದ ಮೇಲಷ್ಟೇ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಬೇಕು ಎಂದು ನ್ಯಾಯಾಧೀಶರು ಜೈಲು ಅಧಿಕಾರಿಗಳಿಗೆ ಸ್ಪಷ್ಟ ಆದೇಶ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *