‘ಟಾಕ್ಸಿಕ್’ ಟ್ರೇಲರ್ ಬಗ್ಗೆ ಚರ್ಚೆ ನಡೆಯುವಾಗಲೇ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಈ ಚಿತ್ರ ಹೇಗಿರದಬಹುದು ಎಂಬ ಸ್ಪಷ್ಟ ಚಿತ್ರಣ ಸಿಕ್ಕಿದೆ. ಯಶ್ ಅವರ ಎದುರು ಬಂದವರು ಉಡೀಸ್ ಆಗುವ ಸೂಚನೆ ಟೀಸರ್ ನೋಡಿದವರಿಗೆ ಸಿಕ್ಕಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಟೀಸರ್ಗಿಂತ ಈ ಟೀಸರ್ ತುಂಬಾನೇ ಭಿನ್ನವಾಗಿದೆ. ಯಶ್ ಅವರ ರಾ ಲುಕ್ ಗಮನ ಸೆಳೆದಿದೆ. ಟೀಸರ್ನಲ್ಲಿ ಇರುವ ಅಂಶಗಳೇನು ಎಂಬುದರ ವಿವರ ಇಲ್ಲಿದೆ.
ಈ ಮೊದಲು ರಿಲೀಸ್ ಆದ ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಲ್ಚಲ್ ಎಬ್ಬಿಸಿತ್ತು. ಲೈಂಗಿಕ ಕ್ರಿಯೆ ನಡೆಸೋ ದೃಶ್ಯವನ್ನು ಟೀಸರ್ನಲ್ಲಿ ತೋರಿಸಿದ್ದು ಅನೇಕರ ಕೋಪಕ್ಕೆ ಕಾರಣ ಆಯಿತು. ಈ ಸಂಬಂಧ ದೂರು ಕೂಡ ದಾಖಲಾಯಿತು. ಆದರೆ, ಅವ್ಯಾವುದು ಟ್ರೇಲರ್ನ ತಡೆಯಲಿಲ್ಲ. ಚಿತ್ರದ ಟೀಸರ್ ಯೂಟ್ಯೂಬ್ ಒಂದರಲ್ಲೇ ಮಿಲಿಯನ್ ವೀಕ್ಷಣೆ ಕಂಡಿತು. ಈಗ ಹೊಸ ಟೀಸರ್ ಮತ್ತಷ್ಟು ಗಮನ ಸೆಳೆದಿದೆ.
ಇದನ್ನೂ ಓದಿ: ‘ಟಾಕ್ಸಿಕ್’ ಟ್ರೇಲರ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಸರ್ಪ್ರೈಸ್ ಕೊಟ್ಟ ಯಶ್
‘ಟಾಕ್ಸಿಕ್’ ಚಿತ್ರವನ್ನು ಗೀತು ಮೋಹನ್ದಾಸ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಕೆವಿಎನ್ ನಿರ್ಮಾಣ ಸಂಸ್ಥೆ ಬಂಡವಾಳ ಹೂಡಿದೆ. ಯಶ್ ಕೂಡ ನಿರ್ಮಾಪಕ. ಈ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಶಿ ಮೊದಲಾದವರು ನಟಿಸಿದ್ದಾರೆ. ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On – 9:42 am, Fri, 20 February 26
