ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಮೊದಲು ಎಲ್ಲಾ ಪಾತ್ರಗಳ ಪರಿಚಯವನ್ನು ತಂಡದವರು ಮಾಡಿದ್ದರು. ಈಗ ಸಿನಿಮಾದ ಟೀಸರ್ ರಿಲೀಸ್ ಮಾಡುವ ಸಮಯ. ಫೆಬ್ರವರಿ 20ರ ಬೆಳಿಗ್ಗೆ 9.35ಕ್ಕೆ ಟೀಸರ್ ಬಿಡುಗಡೆ ಕಾಣಲಿದೆ. ಈ ಟೀಸರ್ ರಿಲೀಸ್ ಆದ ಬಳಿಕ ಸಿನಿಮಾ ಬಗ್ಗೆ ಇರೋ ಕ್ರೇಜ್ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ.
‘ಟಾಕ್ಸಿಕ್’ ಟ್ರೇಲರ್ ಬಗ್ಗೆ ಇತ್ತೀಚೆಗೆ ಸುದ್ದಿ ಹರಿದಾಡಿದೆ. ಮಾರ್ಚ್ ಮೊದಲ ವಾರದಲ್ಲಿ ಟ್ರೇಲರ್ ಬರಲಿದೆ ಎಂಬ ಮಾಹಿತಿ ಇದೆ. ಅದಕ್ಕೂ ಮೊದಲು ಅಭಿಮಾನಿಗಳಿಗೆ ಸರ್ಪ್ರೈಸ್ ಸಿಕ್ಕಿದೆ. ‘ಟಾಕ್ಸಿಕ್’ ಟ್ರೇಲರ್ ರಿಲೀಸ್ ಬಗ್ಗೆ ತಂಡ ಮಾಹಿತಿ ನೀಡಿದೆ. ಈ ವಿಷಯ ಅಭಿಮಾನಿಗಳ ಖುಷಿ ಹೆಚ್ಚಿಸಿದೆ.
ಈ ಮೊದಲು ‘ಟಾಕ್ಸಿಕ್’ ರಾಯ ಪಾತ್ರ ಪರಿಚಯಿಸೋ ಟೀಸರ್ ರಿಲೀಸ್ ಮಾಡಲಾಗಿತ್ತು. ಟೀಸರ್ನಲ್ಲಿ ಸಾಕಷ್ಟು ಬೋಲ್ಡ್ ದೃಶ್ಯಗಳು ಇದ್ದವು. ಆ ದೃಶ್ಯಗಳ ಕಾರಣಕ್ಕೆ ಟೀಸರ್ ಸಾಕಷ್ಟು ಸದ್ದು ಮಾಡಿತು. ಈಗ ಹೊಸ ಟೀಸರ್ ಮೂಲಕ ಪ್ರೇಕ್ಷಕರ ಎದುರು ಬರಲು ಯಶ್ ರೆಡಿ ಆಗಿದ್ದಾರೆ. ಈ ಟೀಸರ್ನಲ್ಲೂ ಬೋಲ್ಡ್ ದೃಶ್ಯಗಳು ಇರುತ್ತವೆಯೇ ಎಂಬುದು ಸದ್ಯದ ಪ್ರಶ್ನೆ.
Toxic: Rocking Star Yash Stands Firm in a Bloody Battlefield in New Poster; Teaser Out Feb 20 at 9:35 AM.#ToxicTeaser#Toxic in Cinemas Worldwide from 19-03-2026@TheNameIsYash #Nayanthara @humasqureshi @advani_kiara @rukminitweets #TaraSutaria #GeetuMohandas @KVNProductions… pic.twitter.com/rOiVSEnPe0
— greatandhra (@greatandhranews) February 19, 2026
‘ಟಾಕ್ಸಿಕ್’ ಸಿನಿಮಾದ ಪ್ರಚಾರ ವೇಗವಾಗಿ ಸಾಗುತ್ತಿಲ್ಲ ಎಂಬ ಬೇಸರ ಅಭಿಮಾನಿಗಳಿಗೆ ಇತ್ತು. ಈಗ ‘ಟೀಸರ್’ ಮೂಲಕ ಸಿನಿಮಾ ಪ್ರಚಾರಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಗುತ್ತಿದೆ. ‘ಟಾಕ್ಸಿಕ್’ ಸಿನಿಮಾ ಮುಂದಕ್ಕೆ ಹೋಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ರಿಲೀಸ್ ಆಗಿರೋ ಪೋಸ್ಟರ್ನಲ್ಲಿ ರಿಲೀಸ್ ದಿನಾಂಕದ ಬಗ್ಗೆ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ. ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬರೋದು ಖಚಿತವಾಗಿದೆ.
ಇದನ್ನೂ ಓದಿ: ‘ಟಾಕ್ಸಿಕ್ಗೆ ಕೇಡು ಬಯಸಿದ ಧುರಂಧರ್ನ ಕರ್ಮ ಹಿಂಬಾಲಿಸುತ್ತಿದೆ’; ಹಿಂದಿ ಯೂಟ್ಯೂಬರ್ ಸೆನ್ಸೇಷನ್ ಹೇಳಿಕೆ
‘ಟಾಕ್ಸಿಕ್’ ಚಿತ್ರಕ್ಕೆ ಯಶ್ ನಾಯಕ. ಗೀತು ಮೋಹನ್ದಾಸ್ ಅವರು ಸಿನಿಮಾನ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಶಿ ಸೇರಿದಂತೆ ಅನೇಕರಿದ್ದಾರೆ. ರೆಟ್ರೋ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಟೀಸರ್ ಮೂಲಕ ಅಭಿಮಾನಿಗಳ ಒಂದಷ್ಟು ಪ್ರಶ್ನೆಗೆ ಉತ್ತರ ಸಿಗೋ ಸಾಧ್ಯತೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
