ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ (Toxic Movie) ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಚಿತ್ರದಲ್ಲಿ ನಯನತಾರಾ ಹಾಗೂ ರುಕ್ಮಿಣಿ ವಸಂತ್ ಸೇರಿದಂತೆ ಪ್ರಮುಖ ನಟಿಯರ ದಂಡೇ ಇದೆ. ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಅಭಿನಯ ಪ್ರೇಕ್ಷಕರ ಗಮನ ಸೆಳೆದಿದೆ. ಇದೀಗ ಕಿಯಾರಾ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಕೂಡ ಟ್ರೇಲರ್ ನೋಡಿ ಪತ್ನಿಯ ಅಭಿನಯಕ್ಕೆ ಜೈ ಎಂದಿದ್ದಾರೆ.
ಸಿದ್ಧಾರ್ಥ್ ಮಲ್ಹೋತ್ರಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಟ್ರೇಲರ್ ಶೇರ್ ಮಾಡಿದ್ದಾರೆ. ಕಿಯಾರಾ ಅವರ ಶ್ರಮ ಹಾಗೂ ಶ್ರದ್ಧೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಈ ಸಿನಿಮಾ ಕಿಯಾರಾ ವೃತ್ತಿಜೀವನದಲ್ಲೇ ಅತ್ಯುತ್ತಮ ಚಿತ್ರವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ನಿರ್ದೇಶಕಿ ಗೀತು ಮೋಹನ್ ದಾಸ್ ಮತ್ತು ನಟ ಯಶ್ ತಂಡಕ್ಕೆ ಶುಭ ಹಾರೈಸಿದ್ದಾರೆ. ದೊಡ್ಡ ಪರದೆ ಮೇಲೆ ಆಗಸ್ಟ್ 26ರಂದು ಸಿನಿಮಾ ನೋಡಲು ಕಾತರದಿಂದ ಕಾಯುತ್ತಿರುವುದಾಗಿ ಬರೆದುಕೊಂಡಿದ್ದಾರೆ.
‘ಟಾಕ್ಸಿಕ್’ ಸಿನಿಮಾ ಬಗ್ಗೆ ಸಿದ್ದಾರ್ಥ್ ಯಾವುದೇ ಪೋಸ್ಟ್ ಮಾಡಿರಲಿಲ್ಲ. ಕಿಯಾರಾ ಬೋಲ್ಡ್ ಅವತಾರ ಕಂಡು ಅವರು ಸುಮ್ಮನಾಗಿರಬಹುದು ಎಂದು ಅನೇಕರು ಹಹೇಳಿದ್ದು ಇದೆ. ಆದರೆ, ಈಗ ಅವರ ಪೋಸ್ಟ್ ಎಲ್ಲಾ ಟ್ರೋಲರ್ಗಳ ಬಾಯಿ ಮುಚ್ಚಿಸಿದೆ.
ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಕಿಯಾರಾ ಕೂಡ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ನಾದಿಯಾ ಪಾತ್ರ ಮಾಡಲು ಗೀತು ಮತ್ತು ಯಶ್ ಅವಕಾಶ ನೀಡಿದರು. ನನ್ನ ಮೇಲಿಟ್ಟ ನಂಬಿಕೆಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದರು. ‘ಟಾಕ್ಸಿಕ್’ ಸಿನಿಮಾ ನನ್ನ ವೃತ್ತಿಜೀವನಕ್ಕೆ ಹೊಸ ತಿರುವು ನೀಡಲಿದೆ. ಈ ಚಿತ್ರದ ನಂತರ ನನ್ನ ಕೆರಿಯರ್‌ನಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಒಬ್ಬ ನಟಿಯಾಗಿ ಈ ಪಾತ್ರ ನನಗೆ ತುಂಬಾ ವಿಶೇಷವಾಗಿದೆ ಎಂದು ಕಿಯಾರಾ ಹರ್ಷ ವ್ಯಕ್ತಪಡಿಸಿದರು.
#KiaraAdvani husband Siddharth Malhotra reaction on #ToxicTrailer 🙌🙌💥💥
Haters meltdown🤣🤣🤣#Yash #YashBOSS #Toxic #ToxicTheMovie pic.twitter.com/8Bg2ZyCb4Q
— Kunal Singh (@kunalreviewer) August 9, 2026
ಮಗಳ ಜನನದ ನಂತರ ಕಿಯಾರಾ ಮತ್ತೆ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. 2025 ರಲ್ಲಿ ಸಿದ್ಧಾರ್ಥ್ ಹಾಗೂ ಕಿಯಾರಾಗೆ ಸರಾಯಾ ಎಂಬ ಹೆಣ್ಣು ಮಗು ಜನಿಸಿತ್ತು. ಸುದೀರ್ಘ ಬ್ರೇಕ್ ನಂತರ ಕಿಯಾರಾ ಈ ಬಿಗ್ ಪ್ರಾಜೆಕ್ಟ್ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳಲ್ಲಿ ಈ ಸಿನಿಮಾದ ಮೇಲೆ ಅಪಾರ ನಿರೀಕ್ಷೆಗಳು ಮೂಡಿವೆ. ಕಿಯಾರಾ ಅವರ ಹೊಸ ಲುಕ್ ಎಲ್ಲರ ಗಮನ ಸೆಳೆಯುತ್ತಿದೆ.
ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾಕ್ಕೆ ರಾಧಿಕಾ ಪಂಡಿತ್ ಕೊಟ್ಟಿರುವ ಕೊಡುಗೆ ಏನು?
‘ಟಾಕ್ಸಿಕ್’ ಗೀತು ಮೋಹನ್ ದಾಸ್ ನಿರ್ದೇಶನದ ಪ್ಯಾನ್ ಇಂಡಿಯಾ ಆಕ್ಷನ್ ಥ್ರಿಲ್ಲರ್ ಆಗಿದೆ. ಈ ಸಿನಿಮಾವನ್ನು ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿ ಏಕಕಾಲಕ್ಕೆ ಶೂಟ್ ಮಾಡಲಾಗಿದೆ. ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಿಗೆ ಡಬ್ ಮಾಡಲಾಗಿದೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ಈ ಚಿತ್ರ ನಿರ್ಮಿಸಿವೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.