‘ಟಾಕ್ಸಿಕ್’ ಟ್ರೈಲರ್ ಬಿಡುಗಡೆಗೆ ನಿಗದಿಯಾಯ್ತು ದಿನಾಂಕ, ಸ್ಥಳ ಎಲ್ಲಿ? – Kannada News | Toxic movie trailer may release on August 28

ಟಾಕ್ಸಿಕ್’ (Toxic) ಪ್ರಸ್ತುತ ಭಾರತದ ಬಹು ನಿರೀಕ್ಷಿತ ಸಿನಿಮಾ. ಯಶ್ ನಟಿಸಿ, ಸಹ ನಿರ್ಮಾಣ ಸಹ ಮಾಡಿರುವ ಈ ಸಿನಿಮಾಕ್ಕಾಗಿ ದೇಶ, ವಿದೇಶಗಳ ಸಿನಿಮಾ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಸಿನಿಮಾದ ಟೀಸರ್, ಪೋಸ್ಟರ್, ಹಾಡುಗಳು ಸಿನಿಮಾದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿವೆ. ಜೊತೆಗೆ ಸಿನಿಮಾದ ಕತೆ ಏನಿರಬಹುದೆಂಬ ಕುತೂಹಲವನ್ನೂ ಹುಟ್ಟು ಹಾಕಿವೆ. ಈಗಾಗಲೇ ಪೋಸ್ಟರ್ ಇನ್ನಿತರೆ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ಟ್ರೈಲರ್ ಬಿಡುಗಡೆಗೂ ಮುಹೂರ್ತ ನಿಗದಿ ಪಡಿಸಿದ್ದಾರೆ.

ಕೆಲ ಮೂಲಗಳ ಪ್ರಕಾರ, ಸಿನಿಮಾದ ಟ್ರೈಲರ್ ಅನ್ನು ಈ ತಿಂಗಳಲ್ಲಿ ಬಿಡುಗಡೆ ಮಾಡುತ್ತಿಲ್ಲ, ಬದಲಿಗೆ ಮುಂದಿನ ತಿಂಗಳ ಎರಡನೇ ವಾರದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ನಿರ್ದಿಷ್ಟವಾಗಿ ಹೇಳಬೇಕೆಂದರೆ, ಆಗಸ್ಟ್ 8 ರಂದು ‘ಟಾಕ್ಸಿಕ್’ ಸಿನಿಮಾದ ಟ್ರೈಲರ್ ರಿಲೀಸ್ ಆಗಲಿದೆ ಎಂಬ ಸುದ್ದಿ ದಟ್ಟವಾಗಿ ಕೇಳಿ ಬರುತ್ತಿದೆ.

ಸಿನಿಮಾದ ಟ್ರೈಲರ್ ಬಿಡುಗಡೆಗಾಗಿ ಬೆಂಗಳೂರಿನಲ್ಲಿ ಯಶ್ ಅದ್ಧೂರಿಯಾದ ಕಾರ್ಯಕ್ರಮವನ್ನು ಆಯೋಜನೆ ಮಾಡಲಿದ್ದಾರಂತೆ. ಈ ಕಾರ್ಯಕ್ರಮದಲ್ಲಿ ಯಶ್ ಹಾಗೂ ಸಿನಿಮಾದ ಇತರೆ ಪ್ರಮುಖ ನಟಿಯರು, ನಟರು, ತಂತ್ರಜ್ಞರು ಎಲ್ಲರೂ ಭಾಗಿ ಆಗಲಿದ್ದಾರೆ. ಕಾರ್ಯಕ್ರಮದಲ್ಲಿ ಕೆಲ ಪ್ರಮುಖ ವ್ಯಕ್ತಿಗಳನ್ನು ಅತಿಥಿಗಳನ್ನಾಗಿ ಕರೆದುಕೊಂಡು ಬರಲು ಸಹ ಯಶ್ ಯೋಜನೆ ಹಾಕಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?

ಸಿನಿಮಾದ ಟ್ರೈಲರ್ ಬಿಡುಗಡೆಗೂ ಮುಂಚೆ ಯಶ್ ಅವರು ದೇಶದಾದ್ಯಂತ ಸಂಚರಿಸಿ ಸಿನಿಮಾದ ಪರ ಪ್ರಚಾರ ಮಾಡಲಿದ್ದಾರೆ. ಎಲ್ಲ ಪ್ರಮುಖ ರಾಜ್ಯಗಳ ಪ್ರಮುಖ ನಗರಗಳಲ್ಲಿಯೂ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ದೇಶ ಮಾತ್ರವಲ್ಲದೆ, ವಿದೇಶಗಳಲ್ಲಿಯೂ ಸಹ ಯಶ್ ಹಾಗೂ ತಂಡ ಅದ್ಧೂರಿ ಪ್ರಚಾರವನ್ನು ಮಾಡಲಿದೆ.

‘ಟಾಕ್ಸಿಕ್’ ಸಿನಿಮಾವನ್ನು ಗೀತು ಮೋಹನ್​​ದಾಸ್ ನಿರ್ದೇಶನ ಮಾಡಿದ್ದು, ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಸಿನಿಮಾನಲ್ಲಿ ನಯನತಾರಾ, ಹುಮಾ ಖುರೇಷಿ, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಸಿನಿಮಾ ಆಗಸ್ಟ್ 26ಕ್ಕೆ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *