ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ (Toxic Movie) ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಗ್ಯಾಂಗ್‌ಸ್ಟರ್ ಕಥಾಹಂದರ ಹೊಂದಿರುವ ಈ ಸಿನಿಮಾ ಮೇಲೆ ಜಾಗತಿಕ ಮಟ್ಟದಲ್ಲಿ ಅಪಾರ ನಿರೀಕ್ಷೆಗಳಿವೆ. ಚಿತ್ರತಂಡವು ಭರ್ಜರಿ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಸದ್ಯದಲ್ಲೇ ಟಿಕೆಟ್ ಬುಕಿಂಗ್ ಆರಂಭವಾಗಲಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸಿನಿಮಾ ನೋಡಲು ಕಾತರದಿಂದ ಕಾಯುತ್ತಿದ್ದಾರೆ.
ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾಗೆ ಸಂಬಂಧಿಸಿದಂತೆ ಈಗೊಂದು ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ಚಿತ್ರದ ಆನ್‌ಲೈನ್ ಟಿಕೆಟ್ ಬುಕಿಂಗ್ ಆಗಸ್ಟ್ 21ರಿಂದ ಆರಂಭವಾಗುವ ಸಾಧ್ಯತೆಯಿದೆ. ಎಲ್ಲಾ ಭಾಷೆಗಳಲ್ಲೂ ಬುಕಿಂಗ್ ಶುಕ್ರವಾರವೇ ಬುಕಿಂಗ್ ಓಪನ್ ಆಗಲಿದೆ ಎಂದು ಗಾಂಧಿನಗರದ ಮೂಲಗಳು ತಿಳಿಸಿವೆ. ನಿರ್ಮಾಪಕರಿಂದ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ.
‘ಟಾಕ್ಸಿಕ್’ ಸಿನಿಮಾದಲ್ಲಿ ಬೃಹತ್ ತಾರಾಗಣವೇ ಒದೆ. ಯಶ್‌ಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಜೊತೆಗೆ ನಯನತಾರಾ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಕ್ಷಯ್ ಒಬೆರಾಯ್ ಹಾಗೂ ಸುದೇವ್ ನಾಯರ್ ಸಾಥ್ ನೀಡಿದ್ದಾರೆ.
ಈ ಅದ್ದೂರಿ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಿಸುತ್ತಿದೆ. ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಂಸ್ಥೆ ಕೂಡ ಜೊತೆಯಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕಿ ಗೀತು ಮೋಹನ್‌ದಾಸ್ ಚಿತ್ರ ನಿರ್ದೇಶಿಸಿದ್ದಾರೆ. ಜನಪ್ರಿಯ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಂಗೀತ ನೀಡಿದ್ದಾರೆ.
ಇದನ್ನೂ ಓದಿ: ‘ಟಾಕ್ಸಿಕ್’ನ ಆ ದೃಶ್ಯಗಳ ನೋಡಿ ಪತ್ನಿ ರಾಧಿಕಾ ಹೇಳಿದ್ದೇನು? ಸತ್ಯ ಹೇಳಿದ ಯಶ್
ಸಿನಿಮಾ ಬಿಡುಗಡೆಗೆ ದಿನಗಳು ಹತ್ತಿರವಾಗುತ್ತಿದ್ದಂತೆ ಅಭಿಮಾನಿಗಳ ಉತ್ಸಾಹ ಹೆಚ್ಚಾಗಿದೆ. ಪ್ರಚಾರ ಕಾರ್ಯಗಳು ಕೂಡ ತೀವ್ರಗತಿಯಲ್ಲಿ ನಡೆಯುತ್ತಿವೆ. ಟಿಕೆಟ್ ಬುಕಿಂಗ್ ದಿನಾಂಕ ಪ್ರಕಟವಾದರೆ ಮುಂಗಡ ಬುಕಿಂಗ್‌ನಲ್ಲಿ ಹೊಸ ದಾಖಲೆ ಸೃಷ್ಟಿಯಾಗುವ ನಿರೀಕ್ಷೆಯಿದೆ. ಯಶ್ ಅಭಿಮಾನಿಗಳು ಚಿತ್ರಮಂದಿರಗಳತ್ತ ಧಾವಿಸಲು ಸಿದ್ಧರಾಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
