Headlines

ಟಾಟಾ ಮೋಟಾರ್ಸ್‌ ‘ಕೌಶಲ್ಯ ಯೋಜನೆ’: 23,000ಕ್ಕೂ ಹೆಚ್ಚು ಯುವಕರಿಗೆ ತರಬೇತಿ, 5,000ಕ್ಕೂ ಅಧಿಕ ಮಂದಿಗೆ ಉದ್ಯೋಗ ಭಾಗ್ಯ – Kannada News | Tata Motors skill programme, 23,000 youth registers, over 5,000 gets trained

ಟಾಟಾ ಮೋಟರ್ಸ್ ಉದ್ಯೋಗಿಗಳುImage Credit source: Tata Group

ಬೆಂಗಳೂರು, ಜುಲೈ 13: ಭಾರತೀಯ ಯುವ ಪೀಳಿಗೆಯ ಸಾಧನೆ ಮತ್ತು ಆಕಾಂಕ್ಷೆಗಳಿಗೆ ರೆಕ್ಕೆ ನೀಡುವ ನಿಟ್ಟಿನಲ್ಲಿ ಪ್ರತಿಷ್ಠಿತ ಟಾಟಾ ಮೋಟಾರ್ಸ್ (Tata Motors) ಸಂಸ್ಥೆಯ ‘ಕೌಶಲ್ಯ ಯೋಜನೆ’ ಭರ್ಜರಿ ಯಶಸ್ಸು ಗಳಿಸಿದೆ. ವಿಶ್ವ ಯುವ ಕೌಶಲ ದಿನದ ಸಂದರ್ಭದಲ್ಲಿ ಸಂಸ್ಥೆಯು ಈ ಮಹತ್ವದ ಮೈಲಿಗಲ್ಲನ್ನು ಪ್ರಕಟಿಸಿದೆ. ಶಿಕ್ಷಣ ಮತ್ತು ಉದ್ಯೋಗಾವಕಾಶಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ರೂಪಿಸಲಾದ ಈ ಯೋಜನೆಯು, ಉದ್ಯಮ ರಂಗದ ನೇರ ನೇತೃತ್ವದಲ್ಲಿ ದೇಶದಲ್ಲಿ ನಡೆಯುತ್ತಿರುವ ಅತಿ ದೊಡ್ಡ ಕೌಶಲಾಭಿವೃದ್ಧಿ ಕಾರ್ಯಕ್ರಮಗಳಲ್ಲಿ ಒಂದಾಗಿ ಹೊರಹೊಮ್ಮಿದೆ.

ಯೋಜನೆಯ ಮುಖ್ಯಾಂಶಗಳು:

  • ಇದುವರೆಗೆ 23,000ಕ್ಕೂ ಹೆಚ್ಚು ಯುವಜನರು ಹೆಸರು ನೋಂದಾಯಿಸಿಕೊಂಡಿದ್ದಾರೆ.
  • ತರಬೇತಿ ಮುಗಿಸಿದ 5,000ಕ್ಕೂ ಹೆಚ್ಚು ಪದವೀಧರರಿಗೆ 100% ಉದ್ಯೋಗ ಕಲ್ಪಿಸಲಾಗಿದೆ.
  • ಜಾಗತಿಕ ಮಟ್ಟದಲ್ಲಿ 50ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಉದ್ಯೋಗಾವಕಾಶಗಳನ್ನು ಒದಗಿಸಲಾಗಿದೆ.
  • ತರಬೇತಿ ಪಡೆದವರಲ್ಲಿ ಶೇ. 21 ರಷ್ಟು ಮಹಿಳೆಯರು ಹಾಗೂ ಶೇ. 25 ರಷ್ಟು ಮಂದಿ ಸಮಾಜದ ಹಿಂದುಳಿದ ಮತ್ತು ವಂಚಿತ ವರ್ಗಗಳಿಗೆ ಸೇರಿದವರಾಗಿದ್ದಾರೆ.

ಭವಿಷ್ಯದ ತಂತ್ರಜ್ಞಾನಕ್ಕೆ ಪೂರಕ ತರಬೇತಿ

2021ರಲ್ಲಿ ಆರಂಭಗೊಂಡ ಈ ಕೌಶಲ್ಯ ಯೋಜನೆಯು ಪ್ರಸ್ತುತ ಪುಣೆ, ಜಮ್‌ಶೆಡ್‌ಪುರ, ಲಕ್ನೋ, ಪಂತ್‌ನಗರ, ಸಾನಂದ್ ಮತ್ತು ಕರ್ನಾಟಕದ ಧಾರವಾಡದಲ್ಲಿರುವ ಟಾಟಾ ಮೋಟಾರ್ಸ್‌ ನ ಉತ್ಪಾದನಾ ಘಟಕಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ.

Tata Motors skill programme, 23,000 youth registers, over 5,000 gets trained

ಟಾಟಾ ಮೋಟರ್ಸ್ ಉದ್ಯೋಗಿಗಳು

ಈ ಯೋಜನೆಯಡಿ ಯುವಜನತೆಗೆ ಸಂಪೂರ್ಣ ಪ್ರಾಯೋಜಿತ ಮೆಕಾಟ್ರಾನಿಕ್ಸ್ ಡಿಪ್ಲೊಮಾವನ್ನು ‘ಕಲಿಯಿರಿ ಮತ್ತು ಗಳಿಸಿ’ (Earn While You Learn) ಮಾದರಿಯಲ್ಲಿ ನೀಡಲಾಗುತ್ತದೆ. ಇಲ್ಲಿ ತರಬೇತಿ ಪಡೆಯುವವರು ಈ ಕೆಳಗಿನ ಆಧುನಿಕ ತಂತ್ರಜ್ಞಾನಗಳಲ್ಲಿ ವಿಶೇಷ ಕೌಶಲಗಳನ್ನು ಮೈಗೂಡಿಸಿಕೊಳ್ಳುತ್ತಿದ್ದಾರೆ:

  • ಆಟೊಮೊಬೈಲ್ ಎಂಜಿನಿಯರಿಂಗ್ ಮತ್ತು ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ
  • ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಮೆಕಾಟ್ರಾನಿಕ್ಸ್
  • ಆಟೊಮೇಷನ್, ಇಂಟರ್ನೆಟ್ ಆಫ್ ಥಿಂಗ್ಸ್ (IoT) ಮತ್ತು ಇಂಡಸ್ಟ್ರಿ 4.0

ಪ್ರಮುಖ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ

ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಟಾಟಾ ಮೋಟಾರ್ಸ್‌ ನ ಡೀಲರ್‌ಶಿಪ್‌ಗಳು, ವೆಂಡರ್‌ಗಳು, ಟಾಟಾ ಗ್ರೂಪ್‌ನ ಇತರ ಕಂಪನಿಗಳು ಸೇರಿದಂತೆ ದೇಶದ ಪ್ರಖ್ಯಾತ ಸಂಸ್ಥೆಗಳಾದ ಟಾಟಾ ಸ್ಟೀಲ್, ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್, ಜೈಡಸ್, ಜೆಎಸ್‌ಡಬ್ಲ್ಯೂ ಗ್ರೀಂಟೆಕ್, ಸುಬ್ರೋಸ್, ಸ್ಪಿನ್ನಿ ಮತ್ತು ವಿಪ್ರೋ ಕಂಪನಿಗಳಲ್ಲಿ ಉದ್ಯೋಗ ಸಿಕ್ಕಿದೆ. ಇದರ ಜೊತೆಗೆ, 50 ಪದವೀಧರರು ಸ್ಲೋವಾಕಿಯಾದ ನಿಟ್ರಾದಲ್ಲಿರುವ ಜಾಗ್ವಾರ್ ಲ್ಯಾಂಡ್ ರೋವರ್ (JLR) ಘಟಕದಲ್ಲಿ ಅಂತರರಾಷ್ಟ್ರೀಯ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ.

Tata Motors skill programme, 23,000 youth registers, over 5,000 gets trained

ಟಾಟಾ ಮೋಟರ್ಸ್ ಉದ್ಯೋಗಿ

ಕೌಶಲ್ಯವಂತ ಯುವಕರಿಗೆ ಉತ್ತಮ ವೃತ್ತಿ ಅವಕಾಶ: ಟಾಟಾ ಮೋಟರ್ಸ್ ಅಧಿಕಾರಿ

“ಭಾರತದ ಉತ್ಪಾದನಾ ವಲಯದ ಸ್ಪರ್ಧಾತ್ಮಕತೆಯು ಇಲ್ಲಿನ ಉದ್ಯೋಗಿಗಳ ಸಾಮರ್ಥ್ಯದ ಮೇಲೆ ನಿರ್ಧಾರವಾಗುತ್ತದೆ. ಕೌಶಲ್ಯ ಯೋಜನೆಯ ಮೂಲಕ ನಾವು ತಾಂತ್ರಿಕ ಶಿಕ್ಷಣ ಮತ್ತು ನೈಜ ಕಾರ್ಯಾನುಭವವನ್ನು ಒಟ್ಟುಗೂಡಿಸಿ, ಮುಂದಿನ ಪೀಳಿಗೆಯ ನುರಿತ ವೃತ್ತಿಪರರನ್ನು ರೂಪಿಸುತ್ತಿದ್ದೇವೆ. ವೇಗವಾಗಿ ಬದಲಾಗುತ್ತಿರುವ ಆಟೊಮೊಬೈಲ್ ಉದ್ಯಮಕ್ಕೆ ಅಗತ್ಯವಿರುವ ನುರಿತ ಪ್ರತಿಭೆಗಳನ್ನು ಒದಗಿಸುವ ಜೊತೆಗೆ, ಯುವಕರು ಅರ್ಥಪೂರ್ಣ ವೃತ್ತಿಜೀವನವನ್ನು ಕಂಡುಕೊಳ್ಳಲು ಈ ಯೋಜನೆ ನೆರವಾಗುತ್ತಿದೆ. ಶೈಕ್ಷಣಿಕ ವಲಯ ಮತ್ತು ಉದ್ಯಮ ರಂಗದ ನಡುವಿನ ಈ ಸಹಭಾಗಿತ್ವವನ್ನು ನಾವು ಮತ್ತಷ್ಟು ವಿಸ್ತರಿಸಲಿದ್ದೇವೆ” ಎಂದು ಟಾಟಾ ಮೋಟರ್ಸ್​ನ ಮುಖ್ಯ ಎಚ್ ಆರ್ ಆಫೀಸರ್ ಸೀತಾರಾಮ್ ಕಂಡಿ ಹೇಳುತ್ತಾರೆ.

ಟಾಟಾ ಮೋಟರ್ಸ್ ಯುವ ಸಾಧಕರ ಯಶೋಗಾಥೆ

“ಮಹಾರಾಷ್ಟ್ರದ ಗ್ರಾಮೀಣ ಭಾಗದ ಬುಡಕಟ್ಟು ಹಳ್ಳಿಯೊಂದರಿಂದ ಬಂದ ನನಗೆ, ಆಟೋಮೊಬೈಲ್ ಉದ್ಯಮದಲ್ಲಿ ಜಾಗತಿಕ ಮಟ್ಟದ ವೃತ್ತಿಜೀವನವನ್ನು ರೂಪಿಸಿಕೊಳ್ಳುವುದು ಒಂದು ಕಾಲದಲ್ಲಿ ಅಸಾಧ್ಯದ ಮಾತಾಗಿತ್ತು. ಆದರೆ ಟಾಟಾ ಮೋಟಾರ್ಸ್‌ ನ ಕೌಶಲ್ಯ ಯೋಜನೆಯು ನನಗೆ ಕೌಶಲ ಮತ್ತು ಆತ್ಮವಿಶ್ವಾಸ ನೀಡಿತು. ಇಂದು ನನ್ನ ಇಡೀ ಹಳ್ಳಿಯಲ್ಲೇ ಪಾಸ್‌ಪೋರ್ಟ್ ಪಡೆದ ಹಾಗೂ ವಿದೇಶದಲ್ಲಿ ವೃತ್ತಿಜೀವನ ಆರಂಭಿಸಿದ ಮೊದಲ ಯುವತಿ ನಾನೇ ಎಂದು ಹೇಳಿಕೊಳ್ಳಲು ಹೆಮ್ಮೆಯೆನಿಸುತ್ತದೆ” ಎಂದು ಉದ್ಯೋಗಿ ಅನಿತಾ ಕೆಂಡೆ ಬೆಥೇಕರ್ ತಿಳಿಸುತ್ತಾರೆ. ಇವರು ಟಾಟಾ ಗ್ರೂಪ್​ಗೆ ಸೇರಿದ, ಮತ್ತು ಸ್ಲೊವಾಕಿಯಾದಲ್ಲಿರುವ ಜೆಎಲ್​ಆರ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಬುಡಕಟ್ಟು ಯುವತಿ.

Tata Motors skill programme, 23,000 youth registers, over 5,000 gets trained

ಟಾಟಾ ಮೋಟರ್ಸ್ ಉದ್ಯೋಗಿ

ಟಾಟಾ ಮೋಟರ್ಸ್​ನ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಆಗಿರುವ ಸೋಹಮ್ ರವೀಂದ್ರ ಮನ್ಮೋಡೆ ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ. “ಸಣ್ಣ ಪಟ್ಟಣದ ಆರ್ಥಿಕವಾಗಿ ಹಿಂದುಳಿದ ಕುಟುಂಬದಿಂದ ಬಂದ ನನಗೆ ಆಟೊಮೊಬೈಲ್ ರಂಗ ಒಂದು ದೂರದ ಕನಸಾಗಿತ್ತು. ಆದರೆ ಕೌಶಲ್ಯ ಯೋಜನೆಯು ಒಂದೇ ಸಮಯದಲ್ಲಿ ಕಲಿಯಲು, ಗಳಿಸಲು ಮತ್ತು ನೈಜ ಉದ್ಯಮದ ಅನುಭವವನ್ನು ಪಡೆಯಲು ನೆರವಾಗುವ ಮೂಲಕ ನನ್ನ ಬದುಕನ್ನೇ ಬದಲಾಯಿಸಿತು. ಇಂದು ನನ್ನ ಕುಟುಂಬಕ್ಕೆ ಆಸರೆಯಾಗಿ ನಿಲ್ಲಲು ನನಗೆ ಹೆಮ್ಮೆಯಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ; ತರಾತುರಿ ತೋರದ ಭಾರತ; ಕೆಟ್ಟ ಒಪ್ಪಂದಕ್ಕಿಂತ, ಒಪ್ಪಂದವಿಲ್ಲದಿರುವುದೇ ಲೇಸು – ಸರ್ಕಾರ ನಿಲುವು

ಪ್ರತಿ ವರ್ಷ 5,000ಕ್ಕೂ ಹೆಚ್ಚು ತರಬೇತಿ ನಿರತರನ್ನು ಉದ್ಯಮ ರಂಗಕ್ಕೆ ಸಿದ್ಧಗೊಳಿಸುವ ಗುರಿ ಹೊಂದಿರುವ ಕೌಶಲ್ಯ ಯೋಜನೆಯು, ಭಾರತದ ಆಟೊಮೊಬೈಲ್ ಮತ್ತು ಉತ್ಪಾದನಾ ವಲಯಕ್ಕೆ ನಿರಂತರವಾಗಿ ನುರಿತ ಪ್ರತಿಭೆಗಳನ್ನು ಒದಗಿಸುತ್ತಿದೆ. ಇಡೀ ವಾಹನ ಉದ್ಯಮವು ಇಲೆಕ್ಟ್ರಿಕ್ (EV) ಮತ್ತು ಆಧುನಿಕ ಸಾಫ್ಟ್‌ವೇರ್ ತಂತ್ರಜ್ಞಾನದತ್ತ ಮುಖ ಮಾಡುತ್ತಿರುವ ಈ ಸಂದರ್ಭದಲ್ಲಿ, ಯುವಕರ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಮತ್ತು ಭಾರತದ ಕೈಗಾರಿಕಾ ಪ್ರಗತಿಗೆ ಕೊಡುಗೆ ನೀಡಲು ಟಾಟಾ ಮೋಟಾರ್ಸ್ ಬದ್ಧವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *