
ನಟಿ ರಮ್ಯಾ (Ramya) ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಇತ್ತೀಚೆಗೆ ತಮ್ಮ ಸೋಶಿಯಲ್ ಮೀಡಿಯಾ ಅಶ್ಲೀಲ ಕಮೆಂಟ್ ಹಾಕಿದವರ ವಿರುದ್ಧ ದೂರು ನೀಡಿದ್ದರು. ಈ ಮೂಲಕ ಇಂಥವರ ವಿರುದ್ಧ ಸುಮ್ಮನೆ ಇರಬಾರದು ಎಂಬ ಸಂದೇಶ ರವಾನಿಸಿದ್ದಾರೆ. ಈ ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿದೆ. ಈ ವಿಷಯ ಸಾಕಷ್ಟು ಚರ್ಚೆ ಆಯಿತು. ಅಶ್ಲೀಲ ಕಮೆಂಟ್ಗಲಿಂದ ಕಂಗೆಟ್ಟಿದ್ದ ಎಲ್ಲರಿಗೂ ಇದೊಂದು ಮಾದರಿ ಆಯಿತು. ಈಗ ಪರಭಾಷೆಯಲ್ಲೂ ನಟಿಯರು ಈ ರೀತಿ ನಿರ್ಧಾರ ಮಾಡುತ್ತಿದ್ದಾರೆ. ನಟಿಯರು ಮುಂದೆ ಬಂದು ಕೇಸ್ ದಾಖಲಿಸುತ್ತಿದ್ದಾರೆ.
ಟಾಲಿವುಡ್ ನಟಿ ರೇಣು ದೇಸಾಯಿಗೆ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಕಮೆಂಟ್ ಹಾಕಿದ್ದರು. ಇದನ್ನು ಅವರು ಪೊಲೀಸರ ಗಮನಕ್ಕೆ ತಂದಿದ್ದಾರೆ. ಸದ್ಯ ತೆಲಂಗಾಣ ಪೊಲೀಸರು ಈ ಪ್ರಕರಣದಲ್ಲಿ ಓರ್ವನನ್ನು ಬಂಧಿಸಿದ್ದಾರೆ. ಆತ ವೃತ್ತಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದಾನೆ.
ನಟಿ ಅನಸುಯಾ ಅವರ ಮೇಲೆ ಕೆಟ್ಟದಾಗಿ ಕಮೆಂಟ್ ಹಾಕಿದ ವ್ಯಕ್ತಿಯನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಈ ಮೂಲ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಅನೇಕ ನಟಿಯರು ಈ ರೀತಿ ಮುಂದೆ ಬಂದ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಕಮೆಂಟ್ ಮಾಡುವವರು ತಮ್ಮ ಗುರುತು ಯಾರಿಗೂ ಸಿಗೋದಿಲ್ಲ ಎಂದು ಅಂದುಕೊಂಡಿರುತ್ತಾರೆ. ಆದರೆ, ಅಸಲಿಗೆ ಹಾಗಿರೋದಿಲ್ಲ ಎಂಬುದನ್ನು ಪೊಲೀಸರು ತೋರಿಸುತ್ತಿದ್ದಾರೆ.
ಇದನ್ನೂ ಓದಿ: ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ ಹೇಳಿದ ರಮ್ಯಾ
ಕರ್ನಾಟಕದಲ್ಲಿ ಅನೇಕ ನಟಿಯರು ಇದೇ ರೀತಿಯ ದಿಟ್ಟ ಕ್ರಮ ಕೈಗೊಂಡಿದ್ದರು. ರಮ್ಯಾ ಅವರು ಈ ವಿಷಯದಲ್ಲಿ ಮೊದಲು ಹೆಜ್ಜೆ ಇಟ್ಟರು. ಅವರು ನೀಡಿದ ದೂರು ಆಧರಿಸಿ ಅನೇಕರನ್ನು ಬಂಧಿಸಲಾಗಿದೆ. ಇತ್ತೀಚೆಗೆ ವಿಜಯಲಕ್ಷ್ಮೀ ಅವರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲವಾಗಿ ಕಮೆಂಟ್ ಹಾಕಿದವರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಈಗ ಟಾಲಿವುಡ್ ನಟಿಯರು ಸಿಡಿದೆದ್ದಿದ್ದಾರೆ. ಇದು ಎಲ್ಲಾ ಚಿತ್ರರಂಗಕ್ಕೂ ಹಬ್ಬಬೇಕು ಎಂಬುದು ಅನೇಕರ ಆಸೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.