ಚೆನ್ನೈ, (ಮೇ 08): ತಮಿಳುನಾಡಿನಲ್ಲಿ (Tamil Nadu) ಸರ್ಕಾರ ರಚಿಸಲು ಟಿವಿಕೆಗೆ (TVK) ಅಗತ್ಯವಾದ ಮ್ಯಾಜಿಕ್ ನಂಬರ್ (118) ಗಿಂತಲೂ ಹೆಚ್ಚಿನ ಸಂಖ್ಯೆ ಲಭಿಸಿದೆ. ಹೌದು…ಆರಂಭದಲ್ಲಿ 118 ಮ್ಯಾಜಿಕ್ ನಂಬರ್ ತೋರಿಸಲು ಹರಸಾಹಸಪಟ್ಟಿದ್ದ ಟಿವಿಕೆ ಮುಖ್ಯಸ್ಥ ವಿಜಯ್ ಗೆ ಬರೋಬ್ಬರಿ 121 ಶಾಸಕರ ಬೆಂಬಲ ದೊರೆತಿದೆ. ಇದರೊಂದಿಗೆ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾದಂತಾಗಿದೆ. ಕಾಂಗ್ರೆಸ್ ಬೆನ್ನಲ್ಲೇ ಎಡಪಕ್ಷಗಳು ಮತ್ತು ವಿಸಿಕೆ ಶಾಸಕರು ಟಿವಿಕೆಗೆ ಬೆಂಬಲ ಸೂಚಿಸಿದ್ದು, ಸದ್ಯದಲ್ಲೇ ವಿಜಯ್ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.
ವಿಜಯ್ ಸರ್ಕಾರ ರಚನೆಗೆ ಕೊನೆ ಕ್ಷಣದಲ್ಲಿ ಬೆಂಬಲ ಘೋಷಿಸಿದ ಪಕ್ಷಗಳಾವುವು ಎನ್ನುವುದನ್ನು ನೋಡುವುದಾದರೆ, ಕಾಂಗ್ರೆಸ್ 5, ವಿಸಿಕೆ 2, ಸಿಪಿಐ 2, ಸಿಪಿಐಎಂ 2 ಮುಸ್ಲಿಂ ಲೀಗ್ನ ಇಬ್ಬರು ಶಾಸಕರು ಬೆಂಬಲ ಘೋಷಿಸಿದ್ದಾರೆ. ಈ ಮೂಲಕ ಟಿವಿಕೆಯ 107 ಶಾಸಕರ ಜೊತೆಗೆ ಎಡಪಕ್ಷಗಳ ಬೆಂಬಲದೊದಿಗೆ ವಿಜಯ್ ಸರ್ಕಾರ ರಚನೆಗೆ ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚು ಅಂದರೆ 121 ಶಾಸಕರ ಬೆಂಬಲ ಸಿಕ್ಕಿದ್ದು, ಈ ಬೆಂಬಲ ಪತ್ರದೊಂದಿಗೆ ವಿಜಯ್ ಅವರು ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆ ಹಕ್ಕು ಮಂಡಿಸಲಿದ್ದಾರೆ. ಇದರೊಂದಿಗೆ ಕಳೆದ ಮೂರು ದಿನಗಳಿಂದ ತಮಿಳುನಾಡಿನಲ್ಲಿ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಕ್ಕೆ ತೆರೆ ಬಿದ್ದಿದೆ.
ಇದನ್ನೂ ನೋಡಿ: ತಮಿಳುನಾಡಿನಲ್ಲಿ TVK ಸರ್ಕಾರ ರಚನೆ ಬಹುತೇಕ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್