ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ವಿಶ್ವಕಪ್ನಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಲ್ಲಿ ಭೀಗುತ್ತಿದ್ದ ಭಾರತದ ವನಿತಾ ಪಡೆಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ಆಲ್‌ರೌಂಡರ್ ಶ್ರೇಯಾಂಕ ಪಾಟೀಲ್ ಗಾಯದಿಂದಾಗಿ ಇಡೀ ಪಂದ್ಯಾವಳಿಯಿಂದಲೇ ಹೊರಬಿದ್ದಿದ್ದಾರೆ. ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದ ವೇಳೆ ಶ್ರೇಯಾಂಕ ಪಾಟೀಲ್ ಗಾಯಕ್ಕೆ ಒಳಗಾಗಿದ್ದರು. ಇದರಿಂದಾಗಿ ಅವರು ಆಟವನ್ನು ಅರ್ಧಕ್ಕೆ ನಿಲ್ಲಿಸಿ ಮೈದಾನ ತೊರೆದಿದ್ದರು. ಇದಾದ ಬಳಿಕ ಶ್ರೇಯಾಂಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ರೇಯಾಂಕ ಅವರ ಗಾಯ ಗಂಭೀರವಾಗಿರುವುದರಿಂದ ಅವರನ್ನು ಪಂದ್ಯಾವಳಿಯಿಂದ ಹೊರಗಿಡಲಾಗಿದೆ. ಶ್ರೇಯಾಂಕ ಅವರ ಅಲಭ್ಯತೆ ತಂಡದ ಸಂಯೋಜನೆಗೆ ದೊಡ್ಡ ಹೊಡೆತ ನೀಡಿದೆ. ಏಕೆಂದರೆ ಶ್ರೇಯಾಂಕ ತಂಡದ ಪ್ರಮುಖ ಸ್ಪಿನ್ನರ್ ಆಗಿದ್ದು, ಕೆಳಕ್ರಮಾಂಕದಲ್ಲಿ ಬ್ಯಾಟಿಂಗ್ ಕೂಡ ಮಾಡುತ್ತಿದ್ದರು.
Published On – 7:35 am, Fri, 19 June 26
