ಮಹಿಳಾ ಟಿ20 ವಿಶ್ವಕಪ್ನ 22ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಂಗ್ಲರ ಪಡೆ ಸೆಮಿಫೈನಲ್ಗೇರಿದೆ. ಲಂಡನ್ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಡ್ಯಾನಿ ವ್ಯಾಟ್-ಹಾಡ್ಜ್ 42 ಎಸೆತಗಳಲ್ಲಿ 8 ಫೋರ್ಗಳೊಂದಿಗೆ 65 ರನ್ ಬಾರಿಸಿದರು.
ಇನ್ನು ಮಧ್ಯಮ ಕ್ರಮಾಂಕದಲ್ಲಿ ಅಲಿಸ್ ಕ್ಯಾಪ್ಸಿ 28 ರನ್ಗಳ ಕೊಡುಗೆ ನೀಡಿದರೆ, ಅಂತಿಮ ಓವರ್ಗಳಲ್ಲಿ ಅಬ್ಬರಿಸಿದ ಹೀದರ್ ನೈಟ್ 26 ಎಸೆತಗಳಲ್ಲಿ 7 ಫೋರ್ಗಳೊಂದಿಗೆ 43 ರನ್ ಸಿಡಿಸಿದರು. ಈ ಮೂಲಕ ಇಂಗ್ಲೆಂಡ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಿತು.
187 ರನ್ಗಳ ಗುರಿ:
187 ರನ್ಗಳ ಕಠಿಣ ಗುರಿ ಪಡೆದ ವೆಸ್ಟ್ ಇಂಡೀಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 69 ರನ್ಗಳಿಸುವಷ್ಟರಲ್ಲಿ 4 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ ಕಣಕ್ಕಿಳಿದ ಶಿನೆಲ್ಲೆ ಹೆನ್ರಿ 30 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 51 ರನ್ ಬಾರಿಸಿದರು.
ಇದಾಗ್ಯೂ ವೆಸ್ಟ್ ಇಂಡೀಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 148 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಇಂಗ್ಲೆಂಡ್ ತಂಡವು 38 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಸೆಮಿಫೈನಲ್ಗೆ ಎಂಟ್ರಿ:
ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಗ್ರೂಪ್-ಬಿ ಯಿಂದ ಸೆಮಿಫೈನಲ್ಗೆ ಎಂಟ್ರಿ ಕೊಟ್ಟಿದೆ. ಇತ್ತ ಸೋತಿರುವ ವೆಸ್ಟ್ ಇಂಡೀಸ್ ತಂಡವು ಸೆಮಿಫೈನಲ್ಗೆ ಪ್ರವೇಶಿಸಬೇಕಿದ್ದರೆ ಐರ್ಲೆಂಡ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕು.
ಮತ್ತೊಂದೆಡೆ ಇಂಗ್ಲೆಂಡ್ ತಂಡದ ಗೆಲುವಿನೊಂದಿಗೆ ಸ್ಕಾಟ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳು ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ನಿಂದ ಹೊರಬಿದ್ದಿದೆ.
ಇಂಗ್ಲೆಂಡ್ ಪ್ಲೇಯಿಂಗ್ 11: ಆಮಿ ಜೋನ್ಸ್ (ವಿಕೆಟ್ ಕೀಪರ್ ) ಡ್ಯಾನಿ ವ್ಯಾಟ್-ಹಾಡ್ಜ್ , ಸೋಫಿಯಾ ಡಂಕ್ಲಿ , ಅಲಿಸ್ ಕ್ಯಾಪ್ಸಿ ,
ಹೀದರ್ ನೈಟ್ , ಫ್ರೇಯಾ ಕೆಂಪ್ , ಡೇನಿಯಲ್ ಗಿಬ್ಸನ್ , ಷಾರ್ಲೆಟ್ ಡೀನ್ (ನಾಯಕಿ) , ಸೋಫಿ ಎಕ್ಲೆಸ್ಟೋನ್ , ಲಿನ್ಸೆ ಸ್ಮಿತ್ , ಲಾರೆನ್ ಬೆಲ್.
ಇದನ್ನೂ ಓದಿ: ಟೀಮ್ ಇಂಡಿಯಾ ವಿರುದ್ಧ ಕಣಕ್ಕಿಳಿಯಲಿರುವ ಭಾರತೀಯ..!
ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಹೇಲಿ ಮ್ಯಾಥ್ಯೂಸ್ (ನಾಯಕಿ) , ಡಿಯಾಂಡ್ರಾ ಡಾಟಿನ್ , ಶೆಮೈನ್ ಕ್ಯಾಂಪ್ಬೆಲ್ (ವಿಕೆಟ್ ಕೀಪರ್) , ಸ್ಟೆಫನಿ ಟೇಲರ್ , ಜಹಜಾರಾ ಕ್ಲಾಕ್ಸ್ಟನ್ , ಶಿನೆಲ್ಲೆ ಹೆನ್ರಿ , ಜಾನಿಲಿಯಾ ಗ್ಲ್ಯಾಸ್ಗೋ , ಅಶ್ಮಿನಿ ಮುನಿಸರ್ , ಆಲಿಯಾ ಅಲ್ಲೆಯ್ನೆ , ಅಫಿ ಫ್ಲೆಚರ್ , ಕರಿಷ್ಮಾ ರಾಮ್‌ಹರಾಕ್.
Published On – 7:18 am, Thu, 25 June 26
