ಟೀಂ ಇಂಡಿಯಾ ಬಾಂಗ್ಲಾಕ್ಕೆ ಬರಲಿದೆ ಎಂಬ ಭರವಸೆ ಇದೆ; ಬಿಸಿಬಿ ಮುಖ್ಯಸ್ಥ ತಮೀಮ್ ಇಕ್ಬಾಲ್ – Kannada News | Team India’s Bangladesh ODI T20 Series: BCB Confident, Official Announcement Soon?

ಪ್ರಸ್ತುತ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ (Team India) ಮುಂದಿನ ತಿಂಗಳು ಆಗಸ್ಟ್ 15 ರಿಂದ ಶ್ರೀಲಂಕಾ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸ ಮಾಡಲಿದೆ. ಇದಾದ ಬಳಿಕ ಸೀಮಿತ ಓವರ್‌ಗಳ ಸರಣಿಗಾಗಿ ಟೀಂ ಇಂಡಿಯಾ ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶಕ್ಕೆ (India vs Bangladesh) ಪ್ರವಾಸ ಕೈಗೊಳ್ಳಲಿದೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಆದರೆ ಎರಡೂ ಮಂಡಳಿಗಳು ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆಯನ್ನು ಮಾಡಿಲ್ಲ.ಸದ್ಯಕ್ಕೆ ಕೇಳಿಬಂದಿರುವ ಮಾಹಿತಿ ಪ್ರಕಾರ, ಈ ಪ್ರವಾಸದಲ್ಲಿ ಭಾರತ ತಂಡವು ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ.

ಆದರೆ ಈ ಎರಡು ಸರಣಿಗಳಿಗಾಗಿ ಟೀಂ ಇಂಡಿಯಾ ಬಾಂಗ್ಲಾದೇಶ ಪ್ರವಾಸ ಮಾಡುತ್ತಾ ಎಂಬುದು ಪ್ರಶ್ನೆಯಾಗಿದೆ. ಏಕೆಂದರೆ ಉಭಯ ದೇಶಗಳ ನಡುವಿನ ಸಂಬಂಧ ಅಷ್ಟು ಉತ್ತಮವಾಗಿಲ್ಲ. ಅಲ್ಲದೆ 2026 ರ ಟಿ20 ವಿಶ್ವಕಪ್‌ಗೆ ಬಾಂಗ್ಲಾದೇಶ ತಂಡ ಭಾರತಕ್ಕೆ ಬರುವುದುಕ್ಕೆ ನಿರಾಕರಿಸಿದ ಬಳಿಕ ಉಭಯ ಕ್ರಿಕೆಟ್ ಮಂಡಳಿಗಳ ಸಂಬಂಧ ಮತ್ತಷ್ಟು ಹದಗೆಟ್ಟಿತ್ತು. ಆದರೀಗ ಬಾಂಗ್ಲಾ ಕ್ರಿಕೆಟ್ ಮಂಡಳಿಗೆ ತನ್ನ ತಪ್ಪಿನ ಅರಿವಾಗಿದ್ದು, ಟೀಂ ಇಂಡಿಯಾವನ್ನು ತನ್ನ ದೇಶಕ್ಕೆ ಆಹ್ವಾನಿಸುತ್ತಿದೆ. ಇದಕ್ಕೆ ಅನುಗುಣವಾಗಿ ಬಿಸಿಬಿ ಮುಖ್ಯಸ್ಥ ತಮೀಮ್ ಇಕ್ಬಾಲ್, ಭಾರತ ತಂಡವು ಸರಣಿಗಾಗಿ ಬಾಂಗ್ಲಾಕ್ಕೆ ಭೇಟಿ ನೀಡುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಸಿಸಿಐ ಜೊತೆ ಮಾತುಕತೆ

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಪ್ರಸ್ತುತ ಮುಖ್ಯಸ್ಥ ಮತ್ತು ಮಾಜಿ ಆಟಗಾರ ತಮೀಮ್ ಇಕ್ಬಾಲ್ ಈ ಬಗ್ಗೆ ಹೇಳಿಕೆ ನೀಡಿರುವುದಾಗಿ ಕ್ರಿಕ್‌ಬಜ್ ವರದಿ ಮಾಡಿದ್ದು ಅದರಲ್ಲಿ, ‘ದುರದೃಷ್ಟವಶಾತ್, ಭಾರತದ ವಿರುದ್ಧದ ಸರಣಿಯ ಬಗ್ಗೆ ನನಗೆ ಯಾವುದೇ ಸುದ್ದಿ ಇಲ್ಲ. ನಾನು ಬಿಸಿಸಿಐ ಜೊತೆ ಮಾತುಕತೆ ನಡೆಸುತ್ತಿದ್ದೇನೆ ಮತ್ತು ಬಿಸಿಬಿ ಸದಸ್ಯರಲ್ಲಿ ಇಮೇಲ್‌ಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ ಮತ್ತು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ.

ಬಾಂಗ್ಲಾದೇಶವು ತುಂಬಾ ಸುರಕ್ಷಿತ ದೇಶ. ಹೀಗಾಗಿ ಟೀಂ ಇಂಡಿಯಾ ಇಲ್ಲಿಗೆ ಬರುತ್ತದೆ ಎಂದು ನಾನು ಪ್ರಾಮಾಣಿಕವಾಗಿ ಭಾವಿಸುತ್ತೇನೆ. ನಮ್ಮ ಕಡೆಯಿಂದ ಅಗತ್ಯವಿರುವ ಯಾವುದೇ ಕ್ರಮಗಳನ್ನು ನಾವು ತೆಗೆದುಕೊಳ್ಳುತ್ತಿದ್ದೇವೆ. ಆದರೆ ನಾವೆಲ್ಲರೂ ಅರ್ಥಮಾಡಿಕೊಳ್ಳಬೇಕಾದ ಒಂದು ವಿಷಯವೆಂದರೆ ನಾನು ಬಿಸಿಬಿ ಅಧ್ಯಕ್ಷ, ಮತ್ತು ನಾನು ಎಂದಿಗೂ ದಾಟಬಾರದ ಮಿತಿಗಳನ್ನು ಹೊಂದಿದ್ದೇನೆ. ಆದ್ದರಿಂದ, ನನ್ನ ಸ್ಥಾನದಲ್ಲಿ ನನ್ನ ಜವಾಬ್ದಾರಿಯ ವ್ಯಾಪ್ತಿಯಲ್ಲಿ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದೇನೆ ಎಂದಿದ್ದಾರೆ.

ಟೀಂ ಇಂಡಿಯಾದಲ್ಲಿ ಒಬ್ಬರಿಗೊಂದು ನ್ಯಾಯ; ಬಿಸಿಸಿಐ ವಿರುದ್ಧ ಮಾಜಿ ಕ್ರಿಕೆಟಿಗ ಗರಂ

ಸರಣಿಯ ಬಗ್ಗೆ ಶೀಘ್ರದಲ್ಲೇ ನಿರ್ಧಾರ

ಈ ಸರಣಿಯ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಮೀಮ್ ಇಕ್ಬಾಲ್ ತಮ್ಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ, ಇದುವರೆಗಿನ ಚರ್ಚೆಗಳು ತುಂಬಾ ಸಕಾರಾತ್ಮಕವಾಗಿವೆ ಎಂದು ಹೇಳಿದ್ದಾರೆ. ಸರಣಿ ನಡೆಯುತ್ತದೆಯೋ ಇಲ್ಲವೋ ಎಂಬುದು ನಮಗೆ ಶೀಘ್ರದಲ್ಲೇ ತಿಳಿಯಬಹುದು. ಬಾಂಗ್ಲಾದೇಶ ಪ್ರಸ್ತುತ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ ಮತ್ತು 2027 ರ ಏಕದಿನ ವಿಶ್ವಕಪ್‌ಗಾಗಿ ಸಿದ್ಧತೆಗಳನ್ನು ಪ್ರಾರಂಭಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:43 pm, Thu, 30 July 26

Source link

Leave a Reply

Your email address will not be published. Required fields are marked *