ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗಿದೆ. ಈ ಬದಲಾವಣೆಯೊಂದಿಗೆ 23 ವರ್ಷದ ಯುವ ಆಲ್‌ರೌಂಡರ್ ಸೂರ್ಯಂಶ್ ಶೆಡ್ಗೆ ಭಾರತ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಟೀಮ್ ಇಂಡಿಯಾ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಗಾಯಗೊಂಡಿದ್ದು, ಹೀಗಾಗಿ ಅವರು ಮುಂಬರುವ ಸರಣಿಗಳಿಂದ ಹೊರಗುಳಿದಿದ್ದಾರೆ.
- ನಿತೀಶ್ ಕುಮಾರ್ ರೆಡ್ಡಿ ಅವರ ಬದಲಿಗೆ ಇದೀಗ ಸೂರ್ಯಂಶ್ ಶೆಡ್ಗೆ ಅವರನ್ನು ಭಾರತ ಟಿ20 ತಂಡಕ್ಕೆ ಆಯ್ಕೆ ಮಾಡಲಾಗಿದೆ.
- ಸೂರ್ಯಂಶ್ ಶೆಡ್ಗೆ ಮುಂಬೈ ಮೂಲದ ಯುವ ಆಲ್‌ರೌಂಡರ್.
- ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದರು.
ನಿತೀಶ್ ಕುಮಾರ್ ರೆಡ್ಡಿಗೆ ಏನಾಗಿದೆ?
ಅಫ್ಘಾನಿಸ್ತಾನ್ ವಿರುದ್ಧದ ಕೊನೆಯ ಏಕದಿನ ಪಂದ್ಯದ ವೇಳೆ ನಿತೀಶ್ ಕುಮಾರ್ ರೆಡ್ಡಿ ಎಡಗಾಲಿನ ತೊಡೆಯ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಅವರ ಸ್ಕ್ಯಾನಿಂಗ್ ರಿಪೋರ್ಟ್ನಲ್ಲಿ ಎಡಗಾಲಿನ ಸ್ನಾಯುವಿನಲ್ಲಿ ತೀವ್ರವಾದ ಊತ ಮತ್ತು ಹಾನಿಯಾಗಿರುವುದು ದೃಢಪಟ್ಟಿದೆ. ಹೀಗಾಗಿ ವೈದ್ಯರು ಕನಿಷ್ಠ ಒಂದು ತಿಂಗಳುಗಳ ಕಾಲ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗಳಿಂದ ನಿತೀಶ್ ಕುಮಾರ್ ರೆಡ್ಡಿ ಹೊರಗುಳಿದಿದ್ದಾರೆ.
ಸೂರ್ಯಂಶ್ ಶೆಡ್ಗೆ ಆಯ್ಕೆ ಯಾಕೆ?
ಸೂರ್ಯಂಶ್ ಶೆಡ್ಗೆ ವೇಗದ ಬೌಲಿಂಗ್ ಹಾಗೂ ಬ್ಯಾಟಿಂಗ್ ಮಾಡಬಲ್ಲ ಆಟಗಾರ. 23 ವರ್ಷದ ಮುಂಬೈ ಆಲ್‌ರೌಂಡರ್ ಇತ್ತೀಚಿನ ದೇಶಿ ಹಾಗೂ ಐಪಿಎಲ್ ಟೂರ್ನಿಗಳಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ.
- ಐಪಿಎಲ್ 2026 ರಲ್ಲಿ ಪಂಜಾಬ್ ಕಿಂಗ್ಸ್ ಪರ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಸೂರ್ಯಂಶ್ 7 ಇನ್ನಿಂಗ್ಸ್‌ಗಳಲ್ಲಿ 175.55 ರ ಸ್ಟ್ರೈಕ್ ರೇಟ್‌ನಲ್ಲಿ 158 ರನ್ ಚಚ್ಚಿದ್ದರು.
- ಶ್ರೀಲಂಕಾದಲ್ಲಿ ನಡೆದ ಭಾರತ ಎ ತಂಡದ ಸರಣಿಯಲ್ಲಿ ಒಂದು ಅರ್ಧಶತಕ (72 ರನ್) ಸೇರಿದಂತೆ ಒಟ್ಟು 147 ರನ್ ಗಳಿಸಿ, 23 ಓವರ್‌ಗಳ ಬೌಲಿಂಗ್ ಜವಾಬ್ದಾರಿಯನ್ನೂ ನಿಭಾಯಿಸಿದ್ದರು.
* ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಲ್‌ರೌಂಡರ್ ಆಟದೊಂದಿಗೆ ಮುಂಬೈ ತಂಡ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಈ ಎಲ್ಲಾ ಕಾರಣಗಳಿಂದಾಗಿ ನಿತೀಶ್ ಕುಮಾರ್ ರೆಡ್ಡಿ ಅವರ ಸ್ಥಾನಕ್ಕೆ ಸೂರ್ಯಂಶ್ ಶೆಡ್ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಇದೇ ಮೊದಲ ಬಾರಿಗೆ ಸೂರ್ಯಂಶ್ ಭಾರತ ತಂಡದಲ್ಲಿ ಕಾಣಿಸಿಳ್ಳಲಿದ್ದಾರೆ.
ಇದನ್ನೂ ಓದಿ: ಸಚಿನ್ರ ವಿಶ್ವ ದಾಖಲೆ ಮುರಿಯಲು ರೂಟ್ ಇನ್ನೆಷ್ಟು ರನ್ ಕಲೆಹಾಕಬೇಕು?
Published On – 7:16 am, Wed, 24 June 26
