ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಪ್ರಕಟ – Kannada News | India vs Afghanistan Series Full schedule

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಲಿದೆ. ಹೀಗಾಗಿ ಟೀಮ್ ಇಂಡಿಯಾ ಆಟಗಾರರು ಮಾರ್ಚ್ 28 ರಿಂದ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಐಪಿಎಲ್ ಮುಗಿಯೋದು ಮೇ 31 ರಂದು. ಇದರ ಬೆನ್ನಲ್ಲೇ ಟೀಮ್ ಇಂಡಿಯಾ 4 ಪಂದ್ಯಗಳ ಸರಣಿ ಆಡಲಿದೆ. ಅದು ಸಹ ಅಫ್ಘಾನಿಸ್ತಾನ್ ವಿರುದ್ಧ ಎಂಬುದು ವಿಶೇಷ.

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 4 ಪಂದ್ಯಗಳ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಂದು ಟೆಸ್ಟ್ ಪಂದ್ಯ ಹಾಗೂ 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ.

ಟೆಸ್ಟ್ ಪಂದ್ಯವು ಚಂಡೀಗಢ್​ನಲ್ಲಿ ನಡೆದರೆ, ಏಕದಿನ ಪಂದ್ಯಗಳು ಧರ್ಮಶಾಲಾ, ಲಕ್ನೋ ಹಾಗೂ ಚೆನ್ನೈನಲ್ಲಿ ಜರುಗಲಿದೆ. ಅಂದರೆ ಮುಂಬರುವ ಸರಣಿಯಲ್ಲೂ ಬೆಂಗಳೂರಿನಲ್ಲಿ ಪಂದ್ಯ ಆಯೋಜಿಸಲು ಬಿಸಿಸಿಐ ನಿರ್ಧರಿಸಿಲ್ಲ.

8 ವರ್ಷಗಳ ಬಳಿಕ ಟೆಸ್ಟ್:

ಭಾರತ ಮತ್ತು ಅಫ್ಘಾನಿಸ್ತಾನ್ ತಂಡ ಈವರೆಗೆ ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಅದು ಸಹ 2018 ರಲ್ಲಿ. ಈ ಪಂದ್ಯವನ್ನು ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 262 ರನ್​ಗಳ ಜಯ ಸಾಧಿಸಿತ್ತು.

ಇದೀಗ ಬರೋಬ್ಬರಿ 8 ವರ್ಷಗಳ ಬಳಿಕ ಮತ್ತೊಮ್ಮೆ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ವಿಶೇಷ ಎಂದರೆ ಈ ಪಂದ್ಯ ನಡೆಯಲಿರುವುದು ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ.

ಅಂದರೆ ಇದೇ ಮೊದಲ ಬಾರಿಗೆ ಚಂಡೀಗಢ್​ ಟೆಸ್ಟ್ ಪಂದ್ಯಕ್ಕೆ ಆತಿಥ್ಯವಹಿಸಲಿದೆ. ಮುಲ್ಲನ್​ಪುರ್​ನಲ್ಲಿರುವ ಎಂವೈಎಸ್ ಸ್ಟೇಡಿಯಂನಲ್ಲಿ ಈವರೆಗೆ ಐಪಿಎಲ್ ಪಂದ್ಯಗಳು, ಒಂದು ಪುರುಷರ ಟಿ20 ಪಂದ್ಯ ಮತ್ತು ಎರಡು ಮಹಿಳಾ ಏಕದಿನ ಪಂದ್ಯಗಳನ್ನು ಆಯೋಜಿಸಲಾಗಿದೆ. ಇದೀಗ ಭಾರತ ಮತ್ತು ಅಫ್ಘಾನಿಸ್ತಾನ್ ಪಂದ್ಯಕ್ಕೆ ಆತಿಥ್ಯವಹಿಸಲು ಸಜ್ಜಾಗಿದೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಕಂಬ್ಯಾಕ್:

ಮೇ ತಿಂಗಳಾಂತ್ಯದಲ್ಲಿ ಐಪಿಎಲ್ ಮುಗಿಯಲಿದ್ದು, ಇದಾದ ಬಳಿಕ ಟೀಮ್ ಇಂಡಿಯಾ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಇನ್ನು ಜೂನ್ 14 ರಿಂದ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಯ ಮೂಲಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಮತ್ತೆ ಕಣಕ್ಕಿಳಿಯಲಿದ್ದಾರೆ. ಈ ಸರಣಿಯ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

ಭಾರತ vs ಅಫ್ಘಾನಿಸ್ತಾನ್ ಸರಣಿ ವೇಳಾಪಟ್ಟಿ:

ದಿನಾಂಕ ಸಮಯ ಪಂದ್ಯ ಸ್ವರೂಪ ಸ್ಥಳ
ಜೂನ್ 6 ಬೆಳಿಗ್ಗೆ 9:30 ಭಾರತ vs ಅಫ್ಘಾನಿಸ್ತಾನ್ ಟೆಸ್ಟ್ ಹೊಸ ಚಂಡೀಗಢ
ಜೂನ್ 14 ಮಧ್ಯಾಹ್ನ 1:30 ಭಾರತ vs ಅಫ್ಘಾನಿಸ್ತಾನ್ ಏಕದಿನ ಪಂದ್ಯ ಧರ್ಮಶಾಲಾ
ಜೂನ್ 17 ಮಧ್ಯಾಹ್ನ 1:30 ಭಾರತ vs ಅಫ್ಘಾನಿಸ್ತಾನ್ ಏಕದಿನ ಪಂದ್ಯ ಲಕ್ನೋ
ಜೂನ್ 20 ಮಧ್ಯಾಹ್ನ 1:30 ಭಾರತ vs ಅಫ್ಘಾನಿಸ್ತಾನ್ ಏಕದಿನ ಪಂದ್ಯ ಚೆನ್ನೈ

Source link

Leave a Reply

Your email address will not be published. Required fields are marked *