ಟ್ರಂಪ್ ಭೇಟಿ ವಿಚಾರ; ಪ್ರಧಾನಿ ಮೋದಿ ಪರ ಬ್ಯಾಟ್ ಬೀಸಿದ ಕಾಂಗ್ರೆಸ್ ನಾಯಕ ಶಶಿ ತರೂರ್ – Kannada News | Congress Leader Shashi Tharoor Backs PM Narendra Modi Over Donald Trump Meet in France

ನವದೆಹಲಿ, ಜೂನ್ 20: ಸಾಮಾನ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿಗಳನ್ನು ತೀವ್ರವಾಗಿ ಟೀಕಿಸುವ ಕಾಂಗ್ರೆಸ್ ಸಂಸದ ಶಶಿ ತರೂರ್ (Shashi Tharoor) ಈ ಬಾರಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಭೇಟಿಯ ವಿಚಾರದಲ್ಲಿ ಪ್ರಧಾನಿ ಮೋದಿಯವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ದೇಶದ ಹಿತಾಸಕ್ತಿ ಮತ್ತು ರಾಜತಾಂತ್ರಿಕತೆಯ ವಿಷಯ ಬಂದಾಗ ಪಕ್ಷದ ರಾಜಕೀಯವನ್ನು ಬದಿಗೆ ಸರಿಸಬೇಕು ಎಂದು ಶಶಿ ತರೂರ್ ಪ್ರತಿಪಾದಿಸಿದ್ದಾರೆ.

ವಿಶ್ವ ರಾಜಕಾರಣದಲ್ಲಿ ಡೊನಾಲ್ಡ್ ಟ್ರಂಪ್ ಅವರ ನಡೆಗಳು ಮತ್ತು ಹೇಳಿಕೆಗಳು ಅತ್ಯಂತ ಅನಿರೀಕ್ಷಿತವಾಗಿರುತ್ತವೆ. ಇಂತಹ ಸಂದರ್ಭದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧಗಳು, ವ್ಯಾಪಾರ ಒಪ್ಪಂದಗಳು ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಯಶಸ್ವಿಯಾಗಿ ಮುನ್ನಡೆಸಲು ಪ್ರಧಾನಿ ಮೋದಿ ಅವರು ಟ್ರಂಪ್ ಅವರೊಂದಿಗೆ ನಡೆಸಿರುವ ಮಾತುಕತೆ ಅತ್ಯಂತ ಪ್ರಮುಖವಾಗಿದೆ ಎಂದು ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Rahul Gandhi Birthday: 56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಶುಭಾಶಯ

“ವಿದೇಶಾಂಗ ನೀತಿಯ ವಿಷಯದಲ್ಲಿ ಭಾರತವು ಒಂದೇ ಧ್ವನಿಯಲ್ಲಿ ಮಾತನಾಡಬೇಕು. ಪ್ರಧಾನಿ ಮೋದಿ ಅವರು ವಿದೇಶದಲ್ಲಿ ಭಾರತದ ಪ್ರತಿನಿಧಿಯಾಗಿ ಅಮೆರಿಕದ ಅಧ್ಯಕ್ಷರನ್ನು ಭೇಟಿಯಾಗಿದ್ದಾರೆ. ಈ ಭೇಟಿಯು ದೇಶದ ಆರ್ಥಿಕ ಮತ್ತು ಭದ್ರತಾ ಹಿತಾಸಕ್ತಿಗಳಿಗೆ ಪೂರಕವಾಗಿದೆ” ಎಂದು ಶಶಿ ತರೂರ್ ಹೇಳಿದ್ದಾರೆ. ಹಾಗೇ, ಟ್ರಂಪ್ ಅವರಂತಹ ನಾಯಕರೊಂದಿಗೆ ವೈಯಕ್ತಿಕ ಸ್ನೇಹ ಮತ್ತು ಕೆಮಿಸ್ಟ್ರಿ ಹೊಂದುವುದು ರಾಜತಾಂತ್ರಿಕ ಮಾತುಕತೆಗಳಲ್ಲಿ ಭಾರತಕ್ಕೆ ಮೇಲುಗೈ ತಂದುಕೊಡುತ್ತದೆ ಎಂದು ಕೂಡ ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ನಾವಿಕರ ವಿಷಯ ಬಂದಾಗ, ಪ್ರಧಾನಮಂತ್ರಿಯವರು ಸಾರ್ವಜನಿಕ ಭಾಷಣದಲ್ಲಿ ಮತ್ತು ನನ್ನ ತಿಳುವಳಿಕೆಯ ಪ್ರಕಾರ ಖಾಸಗಿಯಾಗಿಯೂ ಸಹ ಅತ್ಯಂತ ಬಲವಾಗಿ ತಮ್ಮ ನಿಲುವನ್ನು ಮಂಡಿಸಿದ್ದಾರೆ. ವಿವಿಧ ಹಡಗುಗಳಲ್ಲಿ ನಮ್ಮ ನಾವಿಕರು ಇದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಅದು ಭಾರತೀಯ ಹಡಗಾಗಿರಲಿಲ್ಲ, ಆದರೆ ಇತರ ದೇಶಗಳ ಧ್ವಜ ಹೊಂದಿರುವ ಹಡಗುಗಳಲ್ಲೂ ಸಾಕಷ್ಟು ಸಂಖ್ಯೆಯಲ್ಲಿ ಭಾರತೀಯ ಸಿಬ್ಬಂದಿ ಮತ್ತು ನಾವಿಕರು ಇದ್ದಾರೆ. ಅವರು ವಾಣಿಜ್ಯ ಹಡಗು ಉದ್ಯಮದಲ್ಲಿ ಕೆಲಸ ಮಾಡುತ್ತಿರುವ ನಾಗರಿಕರಾಗಿರುವವರೆಗೆ ಅವರನ್ನು ಯುದ್ಧದ ಹೋರಾಟಗಾರರಂತೆ ಪರಿಗಣಿಸಬಾರದು. ಈ ಬಗ್ಗೆ ಮೋದಿಯವರ ನಿಲುವು ಸರಿಯಾಗಿದೆ” ಎಂದು ಶಶಿ ತರೂರ್ ತಿಳಿಸಿದ್ದಾರೆ.

ಇದನ್ನೂ ಓದಿ: ಯುದ್ಧ-ಸಂಘರ್ಷದಿಂದ ದೂರ, ವ್ಯವಹಾರದಲ್ಲಿ ಚತುರ: ಪ್ರಧಾನಿ ಮೋದಿ ಶ್ರೇಷ್ಠ ನಾಯಕನೆಂದು ಹೊಗಳಿದ ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ವಿದೇಶಿ ಪ್ರವಾಸ ಮತ್ತು ಭೇಟಿಯನ್ನು ಬಹಿರಂಗವಾಗಿ ಸಮರ್ಥಿಸಿಕೊಂಡಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಈ ಹಿಂದೆ ಕೂಡ ಹಲವು ಬಾರಿ ಶಶಿ ತರೂರ್ ಪ್ರಧಾನಿ ನರೇಂದ್ರ ಮೋದಿಯವರನ್ನು ಮೆಚ್ಚಿ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:23 pm, Sat, 20 June 26

Source link

Leave a Reply

Your email address will not be published. Required fields are marked *