ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ಮುಂಭಾಗ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ – Kannada News

ದೇವನಹಳ್ಳಿ, ಜೂನ್ 8: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಅತ್ತಿವಟ್ಟ ಗೇಟ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರಿ ಪ್ರಮಾಣದ ಅನಾಹುತವೊಂದು ತಪ್ಪಿದೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಟ್ರಕ್ ಚಾಲಕನ ಬೇಜವಾಬ್ದಾರಿತನದಿಂದಾಗಿ ಈ ಅಪಘಾತ ಸಂಭವಿಸಿದೆ. ಕೋಲಾರ ಕಡೆಯಿಂದ ಬೆಂಗಳೂರು ಕಡೆಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್ ಅತ್ತಿವಟ್ಟ ಗೇಟ್ ಬಳಿ ಬರುತ್ತಿದ್ದಂತೆಯೇ, ಹೆದ್ದಾರಿಯ ಎಡಬದಿಯಲ್ಲಿ ಚಲಿಸುತ್ತಿದ್ದ ಟ್ರಕ್ ಚಾಲಕನೊಬ್ಬ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಬಲಬದಿಗೆ ಯೂಟರ್ನ್ (U-Turn) ತೆಗೆದುಕೊಳ್ಳಲು ಮುಂದಾಗಿದ್ದಾನೆ. ಟ್ರಕ್‌ನ ಈ ದಿಢೀರ್ ನಡೆಯಿಂದಾಗಿ ನಿಯಂತ್ರಣ ಕಳೆದುಕೊಂಡ ಕೆಎಸ್‌ಆರ್‌ಟಿಸಿ ಬಸ್ ನೇರವಾಗಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಸಾರಿಗೆ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾದರು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *