Headlines

ಟ್ರಾಫಿಕ್ ಫೈನ್ ರಿಯಾಯಿತಿಗೆ ಗುಡ್ ರೆಸ್ಪಾನ್ಸ್: ಕೇವಲ 14 ದಿನದಲ್ಲಿ 18 ಕೋಟಿಗೂ ಅಧಿಕ ದಂಡ ಸಂಗ್ರಹ – Kannada News | 50% Traffic Fine Discount Drives Record Collections: Over ₹18 Crore Recovered in Just 14 Days

ಪ್ರಾತಿನಿಧಿಕ ಚಿತ್ರ Image Credit source: thehindu.com

ಬೆಂಗಳೂರು, ಜುಲೈ 05: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಂಚಾರ ನಿಯಮ ಉಲ್ಲಂಘನೆಯ ಬಾಕಿ ದಂಡದ ಮೇಲಿನ ಶೇಕಡಾ 50ರಷ್ಟು ರಿಯಾಯಿತಿ ಯೋಜನೆಗೆ (Traffic Fine Discount) ಸಾರ್ವಜನಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೂನ್ 21, ರಿಂದ ಜುಲೈ 4ರವರೆಗೆ ಅಂದರೆ ಕೇವಲ 14 ದಿನಗಳ ಅವಧಿಯಲ್ಲಿ ಒಟ್ಟು 18,15,42,200 ರೂ ದಂಡದ ಹಣ ಪಾವತಿಯಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಕೋಟಿ ಕೋಟಿ ದಂಡದ ಹಣ ಪಾವತಿ

ಈ ಕುರಿತಾಗಿ ಬೆಂಗಳೂರು ಸಂಚಾರ ಪೊಲೀಸರು ಟ್ವೀಟ್ ಮಾಡಿದ್ದು, ಕರ್ನಾಟಕ ರಾಜ್ಯ ಸರ್ಕಾರವು ಜೂನ್​​ 04ರಿಂದ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡವನ್ನು ಪಾವತಿಸಲು ಶೇ.50% ರಷ್ಟು ರಿಯಾಯಿತಿಗೆ ಆದೇಶಿಸಿತ್ತು. ಅದರಂತೆ ಜೂನ್​​ 21ರಿಂದ ಜಾರಿಗೆ ಬಂದಿತ್ತು.

ಬೆಂಗಳೂರು ಸಂಚಾರ ಪೊಲೀಸರು ಟ್ವೀಟ್

ದಂಡವನ್ನು ಪಾವತಿಸಲು ನಿಗದಿಪಡಿಸಲಾಗಿದ್ದ ರಿಯಾಯಿತಿ ಅವಧಿ ಅಂದರೆ ಜೂನ್​​ 21ರಿಂದ ಜುಲೈ 04ರ ವರೆಗೆ ವಿವಿಧ ಮಾಧ್ಯಮಗಳ ಮೂಲಕ ಬರೋಬ್ಬರಿ 6,06,032 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಒಟ್ಟು ರೂ.18,15,42,200 ರೂ ದಂಡ ಸಂಗ್ರಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಟ್ರಾಫಿಕ್ ಫೈನ್ ಶೇ 50 ರಿಯಾಯಿತಿ: ಕೇವಲ 4 ದಿನದಲ್ಲಿ 6 ಕೋಟಿ ರೂ. ಸಂಗ್ರಹ!

ವಾಹನ ಸವಾರರು ಈ ರಿಯಾಯಿತಿ ದರದಲ್ಲಿ ಬಾಕಿ ದಂಡ ಪಾವತಿಸಲು ಜುಲೈ 10ರವರೆಗೆ ಮಾತ್ರ ಅವಕಾಶವಿದೆ. ಇನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ದಂಡ ಪಾವತಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಪಿಎಸ್​ಐ ಒಳಗೊಂಡಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರೊಂದಿಗೆ, ವಾಹನ ಸವಾರರು ಸಂಚಾರ ನಿಯಮಗಳನ್ನು ಉಲ್ಲಂಘಿಸದಂತೆ ಜಾಗೃತಿ ಮೂಡಿಸುವ ಕಾರ್ಯದಲ್ಲೂ ಸಿಬ್ಬಂದಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ವರದಿ: ನಟರಾಜ್​, ಮೆಟ್ರೋ ಟಿವಿ9 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *