ನೆಲಮಂಗಲ, ಮೇ 06: ತಾಲೂಕಿನ ಡಾಬಸ್ ಪೇಟೆಯ ಅಂಚೆಮನೆ ಗೇಟ್ ಬಳಿಯ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಬೈಕ್, ಎರಡು ಕಾರು, ಲಾರಿ, ಬಸ್, ಪಿಕಪ್ ವಾಹನ ಅಪಘಾತಕ್ಕೀಡಾಗಿದ್ದು, ಡಿಕ್ಕಿಯ ರಭಸಕ್ಕೆ ಹೆದ್ದಾರಿಯಲ್ಲಿ ಪಿಕ್ಅಪ್ ವಾಹನ ಪಲ್ಟಿಯಾಗಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗುದ್ದು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ದೌಡಾಯಿಸಿದ್ದಾರೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.