
ಕನ್ನಡ ಚಿತ್ರರಂಗದ ದಿಗ್ಗಜ ನಟ ಡಾ. ರಾಜ್ಕುಮಾರ್ ಅವರು ನಿಧನರಾಗಿ ಇಂದಿಗೆ (ಏಪ್ರಿಲ್ 12) ಇಪ್ಪತ್ತು ವರ್ಷಗಳು ಕಳೆದಿವೆ. ಅವರ ಪುಣ್ಯಸ್ಮರಣೆ (Death Anniversary) ಅಂಗವಾಗಿ ಅಪಾರ ಸಂಖ್ಯೆಯ ಅಭಿಮಾನಿಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಸಮಾಧಿಗೆ ನಮಿಸಿದ್ದಾರೆ. ಆಗಮಿಸಿದ ಎಲ್ಲರಿಗೂ ಅನ್ನದಾನದ ವ್ಯವಸ್ಥೆ ಮಾಡಲಾಗಿದೆ. ಅಣ್ಣಾವ್ರು ಇಲ್ಲವಾಗಿ 20 ವರ್ಷಗಳು ಕಳೆದರೂ ಕೂಡ ಜನರಿಗೆ ಅವರ ಮೇಲಿನ ಅಭಿಮಾನ ಕಡಿಮೆ ಆಗಿಲ್ಲ. ಮಕ್ಕಳು, ಮಹಿಳೆಯರು ಸೇರಿದಂತೆ ಅಪಾರ ಸಂಖ್ಯೆ ಅಭಿಮಾನಿಗಳು ಇಂದು ಅಣ್ಣಾವ್ರ ಸಮಾಧಿಗೆ ನಮಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷ ಕೂಡ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಡಾ. ರಾಜ್ಕುಮಾರ್ (Dr Rajkumar) ಕುಟುಂಬದ ಸದಸ್ಯರು ಬಂದು ಸಮಾಧಿಗೆ ಎಡೆ ಇಟ್ಟು ಪೂಜೆ ಸಲ್ಲಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.