ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ದೆಹಲಿಯಲ್ಲಿ ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ! – Kannada News | Karnataka Leadership Row: Siddaramaiah’s AHINDA Strategy in Delhi Amid DK Shivakumar Camp’s ‘May Revolution’ Hopes

ಬೆಂಗಳೂರು, ಏಪ್ರಿಲ್ 29: ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನದ ಕುರಿತಾದ ಗೊಂದಲಗಳು ಮತ್ತೆ ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಅಧಿಕಾರಕ್ಕಾಗಿ ಪೈಪೋಟಿ ಜೋರಾಗಿದೆ. ಸಿದ್ದರಾಮಯ್ಯ ಬಣದಿಂದ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಹೆಚ್.ಸಿ. ಮಹದೇವಪ್ಪ ದೆಹಲಿಗೆ ತೆರಳಿ ಹೈಕಮಾಂಡ್‌ ಎದುರು ಅಹಿಂದ ಕಾರ್ಡ್‌ ಅಸ್ತ್ರ ಪ್ರಯೋಗಿಸಿದ್ದಾರೆ. ದಲಿತ ಮುಖ್ಯಮಂತ್ರಿ ಹುದ್ದೆಯ ಬೇಡಿಕೆಯನ್ನೂ ಇವರು ಮುಂದಿಟ್ಟಿದ್ದಾರೆ. ಮತ್ತೊಂದೆಡೆ, ಡಿಕೆ ಶಿವಕುಮಾರ್ ಬಣ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಬದಲಾವಣೆಯ ಶುಭಸುದ್ದಿಯ ನಿರೀಕ್ಷೆಯಲ್ಲಿದೆ.

ಸಿದ್ದರಾಮಯ್ಯ ಮೌನದಿಂದ ಆತಂಕಗೊಂಡಿರುವ ಅಹಿಂದ ನಾಯಕರು ತಮ್ಮ ರಾಜಕೀಯ ಭವಿಷ್ಯ ಮತ್ತು ಸ್ಥಾನಮಾನಗಳ ಬಗ್ಗೆ ಸ್ಪಷ್ಟತೆ ಪಡೆಯಲು ದೆಹಲಿಗೆ ಧಾವಿಸಿದ್ದಾರೆ. ಅಹಿಂದ ಹೋರಾಟ ಆರಂಭವಾಗಿ 25 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ, ಅಹಿಂದ ನಾಯಕರನ್ನು ಬಿಟ್ಟು ಯಾವುದೇ ನಿರ್ಣಯ ತೆಗೆದುಕೊಳ್ಳುವುದು ಸಾಧ್ಯವಿಲ್ಲ ಎಂದು ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಕಾಂಗ್ರೆಸ್ ಹಿರಿಯ ನಾಯಕ ರಾಜಣ್ಣ, ಸಿದ್ದರಾಮಯ್ಯ ನಂತರ ದಲಿತ ಮುಖ್ಯಮಂತ್ರಿ ಕೂಗಿಗೆ ತಾವು ಬದ್ಧವಾಗಿರುವುದಾಗಿ ಹೇಳಿದ್ದಾರೆ. ಹೈಕಮಾಂಡ್ ನಿರ್ದೇಶನಕ್ಕೆ ಸಿದ್ದರಾಮಯ್ಯ ಬದ್ಧರಾಗಿದ್ದು, ಅಧಿಕಾರ ತ್ಯಾಗ ಮಾಡಲೂ ಸಿದ್ಧರಿದ್ದಾರೆ ಎಂದು ರಾಜಣ್ಣ ತಿಳಿಸಿದ್ದಾರೆ. ಒಟ್ಟಾರೆ, ಮೇ ತಿಂಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುವ ನಿರೀಕ್ಷೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *