ಬೆಂಗಳೂರು, (ಜೂನ್ 19): ಬಿಜೆಪಿಯ ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್ ತಿರುಚಿ ಕಾಂಗ್ರೆಸ್ನಿಂದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ (DK Shivakumar) ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅವಹೇಳನಕಾರಿ ಪೋಸ್ಟ್ ಪ್ರಕರಣವನ್ನು ರದ್ದುಪಡಿಸಿ ಕರ್ನಾಟಕ ಹೈಕೋರ್ಟ್ (karnataka high court) ಮಹತ್ವದ ಆದೇಶ ಹೊರಡಿಸಿದೆ. ಫೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪ ಮಾಡಿ ವಕೀಲ ಯೋಗೇಂದ್ರ ಹೊಡಘಟ್ಟ ಎಂಬುವರು ದಾಖಲಿಸಿದ್ದ ಪ್ರಕರಣವನ್ನು ರದ್ದು ಕೋರಿ ಡಿಕೆ ಶಿವಕುಮಾರ್, ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ.
ಮುಖ್ಯಾಂಶಗಳು
- ಬಿಜೆಪಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್ನಲ್ಲಿ ಸಿಎಂಗೆ ರಿಲೀಫ್
- ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಕೇಸ್ ರದ್ದುಪಡಿಸಿ ಹೈಕೋರ್ಟ್ ಆದೇಶ
- ಬಿಜೆಪಿಯ ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನ
- ಅಭಿಯಾನದ ಪೋಸ್ಟರ್ ತಿರುಚಿ ಎಕ್ಸ್ನಲ್ಲಿ ಕಾಂಗ್ರೆಸ್ನಿಂದ ಪೋಸ್ಟ್
- ವಕೀಲ ಯೋಗೇಂದ್ರ ಹೊಡಘಟ್ಟ ಖಾಸಗಿ ದೂರು ದಾಖಲಿಸಿದ್ದರು
ಸಿಎಂ ಡಿ.ಕೆ.ಶಿವಕುಮಾರ್ ಪರ ವಕೀಲ ಹೆಚ್.ವಿ.ಪ್ರವೀಣ್ ಗೌಡ ವಾದ ಮಾಡಿದ್ದು, ಡಿ.ಕೆ.ಶಿವಕುಮಾರ್ ಸ್ವತಃ ಈ ಪೋಸ್ಟ್ ಮಾಡಿಲ್ಲವೆಂದು ಎಂದು ವಾದ ಮಂಡಿಸಿದರು.
ಇದನ್ನೂ ಓದಿ: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್: ಡಿಕೆಶಿಗೆ ಕೋರ್ಟ್ ಬಿಗ್ ರಿಲೀಫ್
ಪ್ರಕರಣದ ಹಿನ್ನೆಲೆ
ಹುಬ್ಬಳ್ಳಿಯಲ್ಲಿ 1992ರಲ್ಲಿ ನಡೆದ ರಾಮ ಜನ್ಮಭೂಮಿ ಕುರಿತ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕ ಶ್ರೀಕಾಂತ ಪೂಜಾರಿಯನ್ನು 31 ವರ್ಷಗಳ ಬಳಿಕ ಅಂದರೆ ರಾಮ ಮಂದಿರ ಉದ್ಘಾಟನೆಗೆ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ಬಂಧಿಸಿ ಜೈಲಿಗಟ್ಟಿತ್ತು. ಕಾಂಗ್ರೆಸ್ ಸರ್ಕಾರ ಉದ್ದೇಶ ಪೂರ್ವಕವಾಗಿ ಬಂಧಿಸಿದ್ದಾರೆ. ಹೀಗಾಗಿ ಇದನ್ನು ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂದು ವಿಭಿನ್ನ ಅಭಿಯಾನ ಮಾಡಿದ್ದರು. ಇದಕ್ಕೆ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ತಿರುಚಿ ಪೋಸ್ಟರ್ಗಳನ್ನು ಹಾಕಿದ್ದರು. ಬಳಿಕ ವಕೀಲ ಯೋಗೇಂದ್ರ ಹೊಡಘಟ್ಟ ಖಾಸಗಿ ದೂರು ದಾಖಲಿಸಿದ್ದರು.
ಕಾಂಗ್ರೆಸ್ ತಿರುಚಿದ ಪೋಸ್ಟರ್ಗಳು ಫೋರ್ಜರಿ ಮತ್ತು ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಖಾಸಗಿ ದೂರು ಸಲ್ಲಿಸಿದ್ದರು. ದೂರು ಆಧರಿಸಿ ಹೈಗ್ರೌಂಡ ಪೊಲೀಸರು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಬಿಆರ್ ನಾಯ್ಡು ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅರ್ಜಿ ಪರಿಶೀಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಬಳಿಕ ಇದಕ್ಕೆ ಹೈಕೋರ್ಟ್ ಇದಕ್ಕೆ ತಡೆಯಾಜ್ಞೆ ನೀಡಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On – 5:12 pm, Fri, 19 June 26