
ಬೆಂಗಳೂರು, ಮಾರ್ಚ್ 21: ಮೇ ತಿಂಗಳಲ್ಲಿ ಅರಮನೆ ಮೈದಾನದಲ್ಲಿ ಬೃಹತ್ ಮಠಾಧೀಶ್ವರ ಮಹಾಸಭೆ ವಿಚಾರವಾಗಿ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಡಿಸಿಎಂ ಡಿಕೆ ಶಿವಕುಮಾರ್ನ್ನ ಇಂದು ಸದಾಶಿವ ನಗರದ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿ, ಡಿಕೆ ಶಿವಕುಮಾರ್ ಪರ ಮಾತಾಡಿದ ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ಬಜೆಟ್ನಲ್ಲಿ ಸ್ವಾಮೀಜಿಗಳಿಗೆ ಒಂದು ರೂಪಾಯಿ ಕೂಡ ನೀಡಿಲ್ಲ. ಸಿಎಂ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಸಿಎಂ ಪರವಾಗಿ ಮಾತನಾಡಿದ ಸ್ವಾಮೀಜಿಗಳಿಗೆ ಭೂಮಿ ಕೊಟ್ಟಿದ್ದಾರೆ. ಬಡ ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ಯಾಕೆ ಅನುದಾನ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಬೇಕು. ಡಿಕೆ ಶಿವಕುಮಾರ್ನ್ನ ಸಿಎಂ ಮಾಡಬೇಕು ಎಂದು ವರಿಷ್ಠರಿಗೆ ಮನವಿ ಮಾಡ್ತೇವೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.