ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವಧಿಯ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಬೆಂಗಳೂರು, ಜೂನ್​ 03: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದಿನಿಂದ ರಾಜ್ಯದಲ್ಲಿ ಡಿಕೆ ಶಿವಕುಮಾರ್​ ದರ್ಬಾರ್ ಶುರುವಾಗಿದೆ. ಇತ್ತ ಸಿಎಂ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್​​ರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಅಧ್ಯಕ್ಷರಾಗಿರುವ ಅತೀಕ್​, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮಾನ ವೇತನ ಸೇರಿದಂತೆ ಇತರೆ ಸೌಲಭ್ಯಗಳನ್ನು ಪಡೆಯಲಿದ್ದಾರೆ.

ಸಿಎಂ ಎಸಿಎಸ್, ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಮತ್ತು ರಾಜೇಂದ್ರ ಚೋಳನ್ ನೇಮಕ

ಇನ್ನು ಸಿಎಂ ಎಸಿಎಸ್ ಆಗಿ ಐಎಎಸ್​ ಅಧಿಕಾರಿ ತುಷಾರ್ ಗಿರಿನಾಥ್​​ರನ್ನು ನೇಮಕ ಮಾಡಲಾಗಿದ್ದು, ನಗರಾಭಿವೃದ್ಧಿ ಇಲಾಖೆ ಎಸಿಎಸ್ ಹುದ್ದೆ ಹೆಚ್ಚುವರಿ ಹೊಣೆ ನೀಡಲಾಗಿದೆ. ಅದೇ ರೀತಿಯಾಗಿ ಸಿಎಂ ಕಾರ್ಯದರ್ಶಿಯಾಗಿ ಐಎಎಸ್​ ಅಧಿಕಾರಿ ರಾಜೇಂದ್ರ ಚೋಳನ್​ರನ್ನು ನೇಮಕ ಮಾಡಲಾಗಿದ್ದು, ಕೆಪಿಸಿಎಲ್ ಎಂಡಿ ಹುದ್ದೆ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಸಿಎಂ ಸಚಿವಾಲಯ, ಸಲಹೆಗಾರರ ಆಪ್ತ ಶಾಖೆ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಕಚೇರಿಯಲ್ಲಿ ಒಪ್ಪಂದ, ಸ್ಥಳ ನಿಯುಕ್ತಿ ಮತ್ತು ಗುತ್ತಿಗೆ ಆಧಾರದಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *