Headlines

ಡಿಕೆ ಶಿವಕುಮಾರ್ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್ – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಶುರುವಾಗಿದ್ದು, ಅವರೊಂದಿಗೆ ಇನ್ನುಳಿದ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಡಾ. ಜಿ.ಪರಮೇಶ್ವರ್ ಅವರು ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರದಗ್ರಹ ಮಾಡಲಿದ್ದಾರೆ. ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ರಾಜ್ಯ ನಾಯಕರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೈಕಮಾಂಡ್ ಇದಕ್ಕೆ ಬ್ರೇಕ್ ಹಾಕಿದ್ದು, ದಲಿತ ಪರಮೇಶ್ವರ್ ಅವರನ್ನು ಮಾತ್ರ ಡಿಸಿಎಂ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ. ಇನ್ನುಳಿಂದತೆ 12 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಡಿ.ಕೆ.ಶಿವಕುಮಾರ್​ -ಸಿಎಂ, ಡಾ.ಜಿ.ಪರಮೇಶ್ವರ್-ಡಿಸಿಎಂ, ಸತೀಶ್​​ ಜಾರಕಿಹೊಳಿ, ಕೆ.ಹೆಚ್.ಮುನಿಯಪ್ಪ, ಪ್ರಿಯಾಂಕ್​​ ಖರ್ಗೆ, ಕೃಷ್ಣ ಭೈರೇಗೌಡ, ಯು.ಟಿ.ಖಾದರ್​, ಡಾ.ಯತೀಂದ್ರ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್​, ಶರಣಪ್ರಕಾಶ್ ಪಾಟೀಲ್ ಹೆಸರು ಮೊದಲ ಪಟ್ಟಿಯಲ್ಲಿ​ದ್ದಾರೆ. ಇನ್ನು ಮೊದಲ ಪಟ್ಟಿಯಲ್ಲಿ ಹಲವು ಘಟಾನುಘಟಿ ನಾಯಕರಿಗೆ ಸ್ಥಾನ ಸಿಕ್ಕಿಲ್ಲ.

ಒಕ್ಕಲಿಗರ ಕೋಟಾದಲ್ಲಿ ಡಿ.ಕೆ.ಶಿವಕುಮಾರ್ ಸೇರಿ ಮೂವರಿಗೆ ಸ್ಥಾನ ನೀಡಲಾಗಿದ್ದರೆ, ಲಿಂಗಾಯತ ಕೋಟಾದಲ್ಲಿ ಮೂವರು, ದಲಿತ ಕೋಟಾದಡಿ ಪರಮೇಶ್ವರ್ ಸೇರಿ ಮೂವರು, ಕುರುಬ ಸಮುದಾಯದಡಿ ಇಬ್ಬರಿಗೆ ಸಚಿವ ಸ್ಥಾನ ಹಂಚಿಕೆ ಮಾಡಲಾಗಿದೆ. ಇನ್ನು ಎಸ್​​ಟಿ, ಮುಸ್ಲಿಮ್, ಕ್ರಿಶ್ಚಿಯನ್​​ ಕೋಟಾದಡಿ ತಲಾ ಒಬ್ಬರಿಗೆ ಸ್ಥಾನ ನೀಡಲಾಗಿದೆ.

Source link

Leave a Reply

Your email address will not be published. Required fields are marked *