ಕೆಜಿಎಫ್ ಮತ್ತು ಸಲಾರ್ ಚಿತ್ರಗಳ ಮೂಲಕ ಪ್ರಶಾಂತ್ ನೀಲ್ ಭಾರತೀಯ ಚಿತ್ರರಂಗದ ಬಿಗ್ ಡೈರೆಕ್ಟರ್ ಆಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಅವರು ಜೂನಿಯರ್ ಎನ್‌ಟಿಆರ್ ನಟನೆಯ ‘ಡ್ರಾಗನ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆಯೇ ಪ್ರಶಾಂತ್ ನೀಲ್ ಈಗ ಹೊಸದೊಂದು ಸಣ್ಣ ಸಿನಿಮಾಗೆ ಪ್ರೆಸೆಂಟರ್ ಆಗಿ ಸಾಥ್ ನೀಡಿದ್ದಾರೆ. ಆ ಚಿತ್ರದ ಹೆಸರು ‘418’. ಪ್ರಶಾಂತ್ ನೀಲ್ ಈ ಸಿನಿಮಾ ಒಪ್ಪಿಕೊಂಡಿದ್ದಾರೆ ಎಂದರೆ ಅದರಲ್ಲಿ ಏನೋ ವಿಶೇಷತೆ ಇರಲೇಬೇಕು ಎಂಬುದು ಅನೇಕರ ಕುತೂಹಲ.
‘ಪುಷ್ಪ’ ಸಿನಿಮಾ ಖ್ಯಾತಿಯ ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಜೊತೆ ಸೇರಿ ಪ್ರಶಾಂತ್ ನೀಲ್ ಈ ಹಾರರ್ ಸಿನಿಮಾವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ಜುಲೈ 19ರ ಭಾನುವಾರ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಮತ್ತು ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿದೆ. ಜುಲೈ 31ರಂದು ಈ ಸಿನಿಮಾ ಗ್ರ್ಯಾಂಡ್ ಆಗಿ ರಿಲೀಸ್ ಆಗುತ್ತಿದೆ. ರೂಮ್ ಒಳಗಡೆ ಹುಡುಗಿ ದೆವ್ವದ ಅವಾತರದಲ್ಲಿ ಕುಳಿತಿರುವ ಫಸ್ಟ್ ಲುಕ್ ಪೋಸ್ಟರ್ ಹಾರರ್ ವೈಬ್ಸ್ ನೀಡುತ್ತಿದೆ.
Behind this door lies the beginning of all your fears#418TheFilm Grand Release on July 31st, 2026💥#418TheFilmOnJuly31
Produced by @MythriOfficial
Directed by @kirtannadagouda
Presented by #PrashanthNeel
DOP: @dineshdivakar_
Starring #SuryaRaj, @CharanLakkaraju &… pic.twitter.com/SqIDZd5pMJ— Mythri Movie Makers (@MythriOfficial) July 19, 2026
ಈ ಚಿತ್ರವನ್ನು ಕೀರ್ತನ್ ನಾಡಗೌಡ ನಿರ್ದೇಶನ ಮಾಡಿದ್ದಾರೆ. ಇವರು ಈ ಹಿಂದೆ ಪ್ರಶಾಂತ್ ನೀಲ್ ಅವರ ಬಳಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದರು. ಇದು ಇವರ ಮೊದಲ ನಿರ್ದೇಶನದ ಸಿನಿಮಾವಾಗಿದೆ. ಚಿತ್ರದಲ್ಲಿ ಸೂರ್ಯ ರಾಜ್, ಚರಣ್ ಲಕ್ಕರಾಜು ಮತ್ತು ಪ್ರೀತಿ ಪಗಡಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ವೆಂಕಿ ಜಿಜಿ ಈ ಚಿತ್ರಕ್ಕೆ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಸಿನಿಮಾ ರಿಲೀಸ್ ಹತ್ತಿರ ಇರುವುದರಿಂದ ಮುಂದಿನ ಒಂದೆರಡು ದಿನಗಳಲ್ಲಿ ಟ್ರೈಲರ್ ಬರುವ ನಿರೀಕ್ಷೆ ಇದೆ.
ಇದನ್ನೂ ಓದಿ: ಸದ್ಯಕ್ಕಂತೂ ಸೆಟ್ಟೇರಲ್ಲ ಮಹೇಶ್ ಬಾಬು-ಪ್ರಶಾಂತ್ ನೀಲ್ ಸಿನಿಮಾ; ಇಲ್ಲಿದೆ ಕಾರಣಗಳ ಪಟ್ಟಿ
ಭಾರೀ ಕುತೂಹಲ ಮೂಡಿಸಿರುವ ‘ಡ್ರ್ಯಾಗನ್’ ಸಿನಿಮಾ
ಇನ್ನು ಪ್ರಶಾಂತ್ ನೀಲ್ ಡೈರೆಕ್ಟ್ ಮಾಡುತ್ತಿರುವ ಬಿಗ್ ಬಜೆಟ್ ಆ್ಯಕ್ಷನ್ ಸಿನಿಮಾ ‘ಡ್ರ್ಯಾಗನ್’ ಮೇಲೆ ಸಿನಿಪ್ರೀಕ್ಷಕರು ಕಣ್ಣಿಟ್ಟಿದ್ದಾರೆ. ಈ ಚಿತ್ರದಲ್ಲಿ ಮ್ಯಾನ್ ಆಫ್ ಮಾಸಸ್ ಜೂನಿಯರ್ ಎನ್‌ಟಿಆರ್ ನಾಯಕರಾಗಿ ಅಬ್ಬರಿಸಲಿದ್ದಾರೆ. ಚಿತ್ರದಲ್ಲಿ ಬಾಲಿವುಡ್ ಹಿರಿಯ ನಟ ಅನಿಲ್ ಕಪೂರ್, ಸ್ಯಾಂಡಲ್‌ವುಡ್ ಬ್ಯೂಟಿ ರುಕ್ಮಿಣಿ ವಸಂತ್, ಬಿಜು ಮೆನನ್ ಹಾಗೂ ಅಶುತೋಷ್ ರಾಣಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಬಿರುಸಿನ ಶೂಟಿಂಗ್ ಹಂತದಲ್ಲಿರುವ ಈ ಹೈ-ವೋಲ್ಟೇಜ್ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ 2027ರ ಜೂನ್ 11ರಂದು ವಿಶ್ವಾದ್ಯಂತ ಭರ್ಜರಿಯಾಗಿ ತೆರೆಗೆ ಬರಲು ಸಜ್ಜಾಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
