
ತನ್ನ ನಾಯಕತ್ವದಲ್ಲಿ ಭಾರತ ತಂಡಕ್ಕೆ ಮೂರನೇ ಟಿ20 ವಿಶ್ವಕಪ್ ಪ್ರಶಸ್ತಿ ಗೆದ್ದುಕೊಟ್ಟ ಸಂತಸದಲ್ಲಿದ್ದ ಸೂರ್ಯಕುಮಾರ್ ಯಾದವ್ ಅವರ ಮನೆಗೆ ಪುಟ್ಟ ಕಂದಮ್ಮನ ಆಗಮನವಾಗುತ್ತಿದೆ. ಸೂರ್ಯಕುಮಾರ್ ಯಾದವ್ ಅವರ ಮಡದಿ ದೇವಿಶಾ ಶೆಟ್ಟಿ ಅವರ ಬೇಬಿ ಶವರ್ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವಿಶಾ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಸೂರ್ಯಕುಮಾರ್ ಯಾದವ್ ಬಿಳಿ ಸೂಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ದೇವಿಶಾ ಸೀರೆಯುಟ್ಟ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಮಯದಲ್ಲಿ ಸೂರ್ಯಕುಮಾರ್ ಯಾದವ್ ತಮ್ಮ ಪತ್ನಿ ದೇವಿಶಾ ಶೆಟ್ಟಿಯ ಕೈ ಹಿಡಿದು ಒಳಗೆ ಪ್ರವೇಶಿಸುತ್ತಿರುವುದು ಕಾಣಬಹುದು.
ಸೂರ್ಯಕುಮಾರ್ ಯಾದವ್ ಮತ್ತು ದೇವಿಶಾ ಶೆಟ್ಟಿ ಮೊದಲು ಭೇಟಿಯಾದದ್ದು ಕಾಲೇಜಿನಲ್ಲಿ. ಆ ನಂತರ ಸ್ನೇಹ ಪ್ರೇಮಕ್ಕೆ ತಿರುಗಿ, ಸೂರ್ಯಕುಮಾರ್ ದೇವಿಶಾ ಅವರಿಗೆ ಪ್ರಪೋಸ್ ಮಾಡಿದರು. ಹಲವು ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ, ಇಬ್ಬರೂ 2016 ರಲ್ಲಿ ವಿವಾಹವಾದರು. ದೇವಿಶಾ ಶೆಟ್ಟಿ ಕರ್ನಾಟಕದ ಉಡುಪಿ ಮೂಲದವರು. ಕಾಪು ಮಾರಿಕಾಂಬೆಯ ಪರಮಭಕ್ತರಾಗಿರುವ ಈ ಜೋಡಿ ಆಗಾಗ್ಗೆ ಈ ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ