ತಟ್ಟೆಹಕ್ಕಲು ನದಿಯಲ್ಲಿ ಘೋರ ದುರಂತ: ಕಪ್ಪೆಚಿಪ್ಪು ತೆಗೆಯಲು ಹೋದ 14 ಜನ ನೀರುಪಾಲು – Kannada News | Bhatkal Tragedy: several Drowns in Kattehakkalu River at Uttara kannada

ಕಾರವಾರ, (ಮೇ 24): ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದ (Bhatkal) ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋದವರು ನೀರು ಪಾಲಾಗಿದ್ದಾರೆ.  ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 14 ಜನರು ನೀರಿನ ಸುಳಿಗೆ ಸಿಲುಕಿದ್ದು, ಈ ಪೈಕಿ ಮೂವರ ಮೃತದೇಗಳು ಪತ್ತೆಯಾಗಿದೆ.  ಇನ್ನುಳಿದ  11 ಮಂದಿ ನೀರು ಪಾಲಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.  ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದು ಬಂದಿದೆ.

ಮುಖ್ಯಾಂಶಗಳು

  • ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿದ್ದ ಮೂವರು ಜಲಸಮಾಧಿ
  • ಉತ್ತರ ಕನ್ನಡ ಜಿಲ್ಲೆ ಭಟ್ಕಳ ಬಳಿಯ ತಟ್ಟೆಹಕ್ಕಲು ನದಿಯಲ್ಲಿ ಘಟನೆ
  • ತಟ್ಟೆಹಕ್ಕಲು ನದಿಯಲ್ಲಿ 11 ಜನರು ನೀರುಪಾಲಾಗಿರುವ ಶಂಕೆ
  • ಮೂವರ ಮೃತದೇಹ ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್
  • ಕಪ್ಪೆಚಿಪ್ಪು ತೆಗೆಯಲು ನದಿಗೆ ಇಳಿದಿದ್ದ ಒಂದೇ ಕುಟುಂಬದ 14 ಜನ
  • ತಟ್ಟೆಹಕ್ಕಲು ನದಿಯಲ್ಲಿ ನೀರುಪಾಲಾಗಿರುವ 11 ಜನರಿಗಾಗಿ ಶೋಧ
  • ಘಟನಾ ಸ್ಥಳಕ್ಕೆ ಭಟ್ಕಳ ಠಾಣೆ ಪೊಲೀಸರ ಭೇಟಿ, ಪರಿಶೀಲನೆ

ಕಪ್ಪೆಚಿಪ್ಪು ತೆಗೆಯಲು ಹೋಗದ 14 ಜನರ ಪೈಕಿ ಮೂವರ ಮೃತದೇಹಗಳು ಪತ್ತೆಯಾಗಿದ್ದು,  ಮೃತದೇಹಗಳನ್ನ ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ, ಇನ್ನುಳಿದ 11 ಮಂದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭಟ್ಕಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಮೀನುಗಾರರ ಸಹಾಯದಿಂದ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಕಪ್ಪೆಚಿಪ್ಪು ತೆಗೆಯಲು ಹೋದ ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದು ಬಂದಿದೆ. ಎಲ್ಲರೂ ಒಂದೇ ಕುಟುಂಬದವರು ಎಂಬ ಮಾಹಿತಿ ಲಭ್ಯವಾಗಿದೆ.

Source link

Leave a Reply

Your email address will not be published. Required fields are marked *