ಮಂಡ್ಯ, ಆಗಸ್ಟ್ 11: ತಮಿಳುನಾಡಿಗೆ ಮತ್ತೆ ನೀರು ಬಿಡಲು CWRC ಶಿಫಾರಸು ಹಿನ್ನೆಲೆ ಮಂಡ್ಯದಲ್ಲಿ ರೈತರು ಸಿಡಿದೆದ್ದಿದ್ದು, ಈ ಶಿಫಾರಸು ಮರಣ ಶಾಸನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಿಳಿವಳಿಕೆ ಇಲ್ಲದವರು ಮಾಡುವಂತೆ ಆದೇಶ ಮಾಡಿರುವ ಕಾರಣ CWMAನವರು CWRC ಶಿಫಾರಸನ್ನು ಅಮಾನತ್ತಿನಲ್ಲಿಡಬೇಕು. ತಮಿಳುನಾಡಿಗೆ ನೀರು ಬಿಟ್ಟರೇ ರಾಜ್ಯದ ಜನರು ಏನು ಮಾಡಬೇಕು? ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದೆ, ರಾಜ್ಯದ ರೈತರ ಹಿತವನ್ನು ಸಿಎಂ ಡಿಕೆಶಿಯವರು ಕಾಪಾಡಬೇಕು ಎಂದು ಆಗ್ರಹಿಸಿ ರಸ್ತೆಗೆ ಅಡ್ಡಲಾಗಿ ಮಲಗಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರೈತರು ಪ್ರತಿಭಟನೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.