Headlines

ತಮಿಳುನಾಡಿನಲ್ಲಿ ಮೀನು ರಫ್ತು ಘಟಕದಲ್ಲಿ ಗ್ಯಾಸ್ ಲೀಕ್; ಹಲವು ಸಾವು ನೋವು – Kannada News | Ammonia gas leak at a sea food export unit in Tamil Nadu, several death reported

ಅನಿಲ ಸೋರಿಕೆ ದುರಂತದಲ್ಲಿ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿರುವುದು.Image Credit source: PTI

ಚೆನ್ನೈ, ಜೂನ್ 21: ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯಲ್ಲಿರುವ ಸಮುದ್ರ ಆಹಾರ (Seafood) ರಫ್ತು ಘಟಕವೊಂದರಲ್ಲಿ ಅನಿಲ ಸೋರಿಕೆ ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಹಲವು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಎನ್​ಡಿಟಿವಿ ವರದಿ ಪ್ರಕಾರ ಕನಿಷ್ಠ ಇಬ್ಬರು ಕಾರ್ಮಿಕರು ಅಸುನೀಗಿದ್ದಾರೆ. ನ್ಯೂಸ್18ನಲ್ಲಿ ಬಂದಿರುವ ವರದಿ ಪ್ರಕಾರ ಕನಿಷ್ಠ ಏಳು ಮಂದಿ ಮಹಿಳಾ ಕಾರ್ಮಿಕರು ವಿಷಾನಿಲ ಸೋರಿಕೆಯಿಂದ ಸಾವನ್ನಪ್ಪಿರುವುದು ತಿಳಿದುಬಂದಿದೆ.

ಸೋರಿಕೆಯಾದ ಅನಿಲವು ಅಮ್ಮೋನಿಯಾ ಆಗಿದೆ. ತೀವ್ರ ಪ್ರಮಾಣದಲ್ಲಿ ಅಮೋನಿಯಾ ಸೋರಿಕೆಯಾದ್ದರಿಂದ ಘಟಕದಲ್ಲಿದ್ದ ಹಲವು ಕಾರ್ಮಕರು ಅಸ್ವಸ್ಥಗೊಂಡಿದ್ದಾರೆ. ಅನಿಲ ಸೋರಿಕೆಯು ತೀವ್ರ ಸ್ವರೂಪದಲ್ಲಿದ್ದ ಕಾರಣ, ಘಟಕದಲ್ಲಿದ್ದ ಹಲವು ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ವರದಿಗಳ ಪ್ರಕಾರ ಅಸ್ವಸ್ಥಗೊಂಡವರ ಸಂಖ್ಯೆ 60 ಇರಬಹುದು. ಇವರ ಪೈಕಿ ಹಲವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದು ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಭಾರತ-ಬ್ರಿಟನ್ ವ್ಯಾಪಾರ ಒಪ್ಪಂದ: ಭಾರತೀಯ ವಾಹನ ತಯಾರಕರಿಗೆ ದೊಡ್ಡ ಮಾರುಕಟ್ಟೆ ಅವಕಾಶ

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಮತ್ತು ರಕ್ಷಣಾ ಸಿಬ್ಬಂದಿ, ಸೋರಿಕೆಯನ್ನು ತಡೆಗಟ್ಟಲು ಪ್ರಯತ್ನಿಸಿದರು. ಘಟಕದಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗಿದೆಯೇ ಮತ್ತು ಅನಿಲ ಸೋರಿಕೆಗೆ ನಿಖರ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

ತಿರುವಳ್ಳೂರ್ ಜಿಲ್ಲೆಯ ಪೆರಿಯಪಾಳಯಂ ಬಳಿಯ ಕನ್ನಿಗೈಪಾರ್​ನಲ್ಲಿನ ಸೇಂಟ್ ಪೀಟರ್ಸ್ ಅಂಡ್ ಪೌಲ್ ಸೀಫುಡ್ಸ್ ಎಕ್ಸ್ಪೋರ್ಟ್ಸ್ ಘಟಕದಲ್ಲಿ (Saint Peters and Paul Seafoods Exports Facility) ಈ ಘಟನೆ ನಡೆದಿದೆ. ಘಟನೆ ನಡೆದಾಗ ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ತಲೆಸುತ್ತು, ಉಸಿರಾಟ ತೊಂದರೆ, ವಾಂತಿ ಮತ್ತಿತರ ತೊಂದರೆ ಆಗಿದೆ. ಅವರನ್ನು ಕೂಡಲೆ ವಿವಿಧ ಆಂಬುಲೆನ್ಸ್​​ಗಳ ಮೂಲಕ ಬೇರೆ ಬೇರೆ ಆಸ್ಪತ್ರೆಗಳಿಗೆ ಸಾಗಿಸುವ ಪ್ರಯತ್ನಗಳಾದವು.

ಇದನ್ನೂ ಓದಿ: ಏಪ್ರಿಲ್​ನಿಂದ ಜೂನ್ 14ರವರೆಗೆ ಭಾರತದ ರಫ್ತು ಶೇ. 15ರಷ್ಟು ಏರಿಕೆ: ವಾಣಿಜ್ಯ ಸಚಿವ ಪಿಯೂಶ್ ಗೋಯಲ್

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಗ್ಯಾಸ್ ಸೋರಿಕೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *