ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ – Kannada News

ಚೆನ್ನೈ, ಜೂನ್ 3: ಜೂನ್ 18ರಂದು ನಡೆಯಲಿರುವ ತಮಿಳುನಾಡಿನ ರಾಜ್ಯಸಭಾ ಉಪಚುನಾವಣೆಗೆ ನಟ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ತನ್ನ ಪಾಲಿನ ಸೀಟನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡಲು ನಿರ್ಧರಿಸಿದೆ. ಈ ನಿರ್ಧಾರವು ಮುಂಬರುವ ದಿನಗಳಲ್ಲಿ ತಮಿಳುನಾಡಿನ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ತೆರವಾಗಿರುವ 1 ರಾಜ್ಯಸಭಾ ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗವು ಇತ್ತೀಚೆಗೆ ಉಪಚುನಾವಣೆ ಪ್ರಕಟಿಸಿತ್ತು.

ಜೂನ್ 18ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಅಂದೇ ಸಂಜೆ ಫಲಿತಾಂಶ ಹೊರಬೀಳಲಿದೆ. ವಿಧಾನಸಭೆಯಲ್ಲಿನ ಸಂಖ್ಯಾಬಲ ಮತ್ತು ರಾಜಕೀಯ ತಂತ್ರಗಾರಿಕೆಯ ಭಾಗವಾಗಿ ಟಿವಿಕೆ ಈ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದು, ಕಾಂಗ್ರೆಸ್ ಶೀಘ್ರದಲ್ಲೇ ತನ್ನ ಅಧಿಕೃತ ಅಭ್ಯರ್ಥಿಯನ್ನು ಘೋಷಿಸಲಿದೆ.

ಇದನ್ನೂ ಓದಿ: ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು; ಎಐಎಡಿಎಂಕೆಗೆ ರಾಜೀನಾಮೆ ನೀಡಿ ಟಿವಿಕೆಯತ್ತ ಮುಖ ಮಾಡಿದ 3 ಶಾಸಕರು

ಟಿವಿಕೆ ಪಕ್ಷವು ತಮಿಳುನಾಡಿನ ರಾಜಕೀಯ ರಂಗಕ್ಕೆ ಪ್ರವೇಶಿಸಿದ ನಂತರ ತೆಗೆದುಕೊಳ್ಳುತ್ತಿರುವ ಪ್ರಮುಖ ರಾಜಕೀಯ ನಿರ್ಧಾರ ಇದಾಗಿದೆ. ಈಗಾಗಲೇ ಚುನಾವಣಾ ಅಧಿಸೂಚನೆ ಹೊರಬಿದ್ದಿರುವುದರಿಂದ, ಕಾಂಗ್ರೆಸ್ ಹೈಕಮಾಂಡ್ ತಮಿಳುನಾಡಿನ ಹಿರಿಯ ನಾಯಕರೊಬ್ಬರನ್ನು ಈ ಸ್ಥಾನಕ್ಕೆ ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *