ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; ಬಿಜೆಪಿಗೆ ಕೆ. ಅಣ್ಣಾಮಲೈ ದಿಢೀರ್ ರಾಜೀನಾಮೆ

ನವದೆಹಲಿ, ಜೂನ್ 2: ತಮಿಳುನಾಡಿನ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡು ಬಿಜೆಪಿಯ ಪ್ರಮುಖ ನಾಯಕ ಕೆ. ಅಣ್ಣಾಮಲೈ ಇಂದು ಭಾರತೀಯ ಜನತಾ ಪಕ್ಷಕ್ಕೆ (BJP) ರಾಜೀನಾಮೆ ನೀಡಿದ್ದಾರೆ. ಕೆಲವು ದಿನಗಳಿಂದ ಅಣ್ಣಾಮಲೈ ಬಿಜೆಪಿನ ತೊರೆದು ಹೊಸ ಪಕ್ಷ ಕಟ್ಟಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಆದರೆ, ಈ ಬಗ್ಗೆ ಅಣ್ಣಾಮಲೈ ಯಾವುದೇ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅಣ್ಣಾಮಲೈ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ತಮಿಳುನಾಡು ರಾಜಕಾರಣದಲ್ಲಿ ಅತ್ಯಂತ ಪ್ರಭಾವಶಾಲಿ ಮತ್ತು ಆಕ್ರಮಣಕಾರಿ ನಾಯಕ ಎಂದೇ ಗುರುತಿಸಿಕೊಂಡಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಬಿಜೆಪಿಗೆ ದಿಢೀರ್ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ದೆಹಲಿಗೆ ಭೇಟಿ ನೀಡಿರುವ ಅವರು ಪಕ್ಷದ ಉಸ್ತುವಾರಿ ಹಾಗೂ ಹಿರಿಯ ನಾಯಕರಾದ ನಿತಿನ್ ನಬಿನ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣಾ ಫಲಿತಾಂಶಗಳು ಮತ್ತು ಬಿಜೆಪಿಯ ಆಂತರಿಕ ಭಿನ್ನಾಭಿಪ್ರಾಯಗಳ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

Source link

Leave a Reply

Your email address will not be published. Required fields are marked *