Headlines

ತಮ್ಮನ್ನು ಬೆಂಬಲಿಸದವರನ್ನು ಅಮೆರಿಕದಲ್ಲೂ ನೆನಪಿಸಿಕೊಂಡ ಯಶ್ – Kannada News | Yash’s ‘Toxic’ Movie Global Ambition: Star Shines at CinemaCon 2026

ರಾಕಿಂಗ್ ಸ್ಟಾರ್ ಯಶ್ ಅವರ (Yash) ‘ಟಾಕ್ಸಿಕ್’ ಸಿನಿಮಾ ಕನ್ನಡದ ಜೊತೆಗೆ ಇಂಗ್ಲಿಷ್​​ನಲ್ಲೂ ಶೂಟ್​ ಆಗಿದೆ. ಈ ಸಿನಿಮಾ ಜೂನ್ 4ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಇದರ ಜೊತೆಗೆ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದಲ್ಲೂ ಯಶ್ ನಟಿಸಿದ್ದಾರೆ. ಈಗ ಯಶ್ ಅವರು ಅಮೆರಿಕದ ಲಾಸ್ ಎಂಜಲೀಸ್​​ಗೆ ತೆರಳಿದ್ದಾರೆ. ಅಲ್ಲಿ ನಡೆದ ‘ಸಿನಿಮಾಕಾನ್ 2026’ರಲ್ಲಿ ಪಾಲ್ಗೊಂಡು ತಮ್ಮ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ.

ಇಂಗ್ಲಿಷ್ ರಿಪೋರ್ಟರ್ ಒಬ್ಬರು ಯಶ್ ಬಳಿ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರು ‘ಟಾಕ್ಸಿಕ್’ ಟೀಸರ್ ಹೊಗಳಿದ್ದಾರೆ. ವಿಶ್ಯುವಲ್ಸ್​ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ‘ನಮಗೆ ಇಲ್ಲಿ ಟಾಕ್ಸಿಕ್ ಸಿನಿಮಾದ ರೀತಿಯ ವಿಶ್ಯುವಲ್ಸ್ ಏಕೆ ಕಾಣಲ್ಲ’ ಎಂದು ತಮಗೆ ತಾವೇ ಪ್ರಶ್ನೆ ಮಾಡಿಕೊಂಡಿದ್ದಾಗಿ ರಿಪೋರ್ಟರ್ ಹೇಳಿದ್ದಾರೆ. ಜೊತೆಗೆ ಸಿನಿಮಾ ಮಾಡುವಾಗ, ಆ್ಯಕ್ಷನ್ ಮಾಡುವಾಗ ಸಾಕಷ್ಟು ಫನ್ ಮಾಡಿದ್ದೀರಿ ಎನಿಸುತ್ತದೆ ಅಲ್ಲವೇ ಎಂದು ಯಶ್​​ಗೆ ಕೇಳಲಾಗಿದೆ.

‘ಟಾಕ್ಸಿಕ್ ತುಂಬಾನೇ ಮಹತ್ವಾಕಾಂಕ್ಷೆಯ ಸಿನಿಮಾ. ಜನರು ನನಗೆ ಯಶಸ್ಸು ಕೊಟ್ಟಿದ್ದು ಸೆಲೆಬ್ರೇಟ್ ಮಾಡಲಾಗಲಿ ಅಥವಾ ಫನ್ ಮಾಡೋದಕ್ಕಾಗಲಿ ಅಲ್ಲ. ಪ್ರತಿ ಬಾರಿ ದೊಡ್ಡ ಯಶಸ್ಸು ಸಿಕ್ಕಾಗ ಇನ್ನೂ ಉತ್ತಮವಾಗಿ ಮಾಡುವ ಜವಾಬ್ದಾರಿ ನನ್ನ ಮೇಲೆ ಇದೆ ಎಂದು ನನಗೆ ಸದಾ ಅನಿಸುತ್ತದೆ’ ಎಂದಿದ್ದಾರೆ ಯಶ್.

ಅಮೆರಿಕದಲ್ಲೂ ಯಶ್ ತಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. ‘ಭಾರತದಲ್ಲಿ ನನ್ನನ್ನು ಜನರು ಸಾಕಷ್ಟು ಬೆಂಬಲಿಸಿದ್ದಾರೆ. ಭಾರತದ ಕಥೆ ಹಾಗೂ ಭಾರತ ಚಿತ್ರರಂಗವನ್ನು ವಿಶ್ವ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು ಎಂಬುದು ನನ್ನ ಉದ್ದೇಶ’ ಎಂದು ಯಶ್ ಹೇಳಿದ್ದಾರೆ. ಅವರ ಹೇಳಿಕೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ.

ಇದನ್ನೂ ಓದಿ: ನೀವಂದುಕೊಂಡಂತಿಲ್ಲ ‘ಟಾಕ್ಸಿಕ್’, ಕಾಣುವುದೇ ಒಂದು, ಇರುವುದೇ ಒಂದು ಎಂದ ಯಶ್

ಯಶ್ ಅವರು ಸಾಮಾನ್ಯ ಕುಟುಂಬದಿಂದ ಬಂದವರು. ಈಗ ಭಾರತ ಚಿತ್ರರಂಗವನ್ನು ವಿಶ್ವ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಕನಸು ಕಂಡು, ಅದರಲ್ಲಿ ಯಶಸ್ಸು ಕಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *