ಬೆಂಗಳೂರು, ಮೇ.11: ತಮ್ಮ ಮಾಡಿದ ತಪ್ಪಿಗೆ ಅಣ್ಣ ಶಿಕ್ಷೆ ಅನುಭವಿಸಿರುವ ಅವಮಾನಿಯ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಪ್ರೀತಿ ಮಾಡಿದ ತಮ್ಮನ ತಪ್ಪಿಗೆ ಅಣ್ಣನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಕರನ ಅಣ್ಣನನ್ನೇ ಕಿಡ್ನಾಪ್ ಮಾಡಿ, ಕೈಕಾಲು ಕಟ್ಟಿ ಹಾಕಿ ದೌರ್ಜನ್ಯ ನಡೆಸಿರುವ ವೀಡಿಯೋ ಈಗ ಆತಂಕ ಸೃಷ್ಟಿಸಿದೆ.
ಬ್ಯಾಡರಹಳ್ಳಿಯ ಶಿವಕುಮಾರ್ ಎಂಬಾತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆದರೆ ಇವರ ಪ್ರೀತಿಗೆ ಯುವತಿಯ ಮನೆಯವರಿಂದ ತೀವ್ರ ವಿರೋಧವಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರೂ ಇತ್ತೀಚೆಗೆ ಮನೆ ಬಿಟ್ಟು ಓಡಿ ಹೋಗಿದ್ದರು. ಇದರಿಂದ ಕೆರಳಿದ ಯುವತಿಯ ತಂದೆ ಬಸವರಾಜ್ ಮತ್ತು ಅವರ ಸಂಬಂಧಿಕರು, ಶಿವಕುಮಾರ್ ಸಿಗದಿದ್ದಕ್ಕೆ ಆತನ ಅಣ್ಣ ಕೊಟ್ರೇಶ್ ಎಂಬಾತನ ಮೇಲೆ ಸೇಡು ತೀರಿಸಿಕೊಳ್ಳಲು ಸಂಚು ರೂಪಿಸಿದ್ದರು.
ಕೊಟ್ರೇಶ್ ಬ್ಯಾಡರಹಳ್ಳಿಯ ದೇವಸ್ಥಾನವೊಂದರಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. “ಪೊಲೀಸ್ ಸ್ಟೇಷನ್‌ಗೆ ಹೋಗೋಣ ಬಾ” ಎಂದು ನಂಬಿಸಿ ಆರೋಪಿಗಳು ಕೊಟ್ರೇಶ್‌ನನ್ನು ಕಾರಿನಲ್ಲಿ ಅಪಹರಿಸಿದ್ದಾರೆ. ಅಜ್ಞಾತ ಸ್ಥಳಕ್ಕೆ ಕರೆದೊಯ್ದು, ಕೊಟ್ರೇಶ್‌ನ ಕೈಕಾಲುಗಳನ್ನು ಕಟ್ಟಿ ಹಾಕಿ ಮನಬಂದಂತೆ ಥಳಿಸಿದ್ದಾರೆ.
ಇದನ್ನೂ ಓದಿ: ಉದ್ಯೋಗಿಗಳೋ ಅಥವಾ ರೋಬೋಟ್‌ಗಳೋ?: ಕಂಪನಿಯ ವಿಚಿತ್ರ ನಿಯಮಕ್ಕೆ ‘ನೋ’ ಎಂದ ಯುವತಿ
ಹಲ್ಲೆ ನಡೆಸುವಾಗ ಆರೋಪಿಗಳು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. “ಶಿವು ಎಲ್ಲೇ ಇದ್ದರೂ ಹುಡುಗಿಯನ್ನು ತಂದು ಒಪ್ಪಿಸು” ಎಂದು ಕೊಟ್ರೇಶ್ ಕೈಯಲ್ಲಿ ಹೇಳಿಸಿ, ಆ ವೀಡಿಯೋವನ್ನು ಅವರ ಸಂಬಂಧಿಕರಿಗೆ ಕಳುಹಿಸಿ ಬೆದರಿಕೆ ಹಾಕಿದ್ದಾರೆ. ವೀಡಿಯೋದಲ್ಲಿ ಕೊಟ್ರೇಶ್ ಜೀವಕ್ಕಾಗಿ ಅಂಗಲಾಚುತ್ತಿರುವುದು ಕಂಡುಬಂದಿದೆ. ವೀಡಿಯೋ ಬೆನ್ನಲ್ಲೇ ಕೊಟ್ರೇಶ್ ಸಂಬಂಧಿಕರು ಬ್ಯಾಡರಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಯಾವಗಾ ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ಮಾಡಲು ಶುರು ಮಾಡಿದದ್ದಾರೆ ಎಂದು ಆರೋಪಿಗಳಿಗೆ ಗೊತ್ತಾಯಿತಿ ತಕ್ಷಣ ಕೊಟ್ರೇಶ್‌ನನ್ನು ಬಿಟ್ಟು ಪರಾರಿಯಾಗಿದ್ದಾರೆ. ಇದೀಗ ಬ್ಯಾಡರಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
