ಬೆಂಗಳೂರು, (ಜೂನ್ 23): ಸಿಲಿಕಾನ್ ಸಿಟಿಯ ಜೀವನಾಡಿಯಾಗಿರುವ ನಮ್ಮ ಮೆಟ್ರೋದ ನೇರಳೆ ಮಾರ್ಗದ (Purple Line) ಸಂಚಾರದಲ್ಲಿ ಇಂದು ತಾಂತ್ರಿಕ ದೋಷದಿಂದಾಗಿ ವ್ಯತ್ಯಯ ಉಂಟಾಗಿದೆ. ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ರೈಲೊಂದರಲ್ಲಿ ಹಠಾತ್ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಪರಿಣಾಮ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸಿದ್ದು, ಬಿಎಂಆರ್‌ಸಿಎಲ್ ದೋಷ ಸರಿಪಡಿಸುವ ಕಾರ್ಯದಲ್ಲಿ ತೊಡಗಿದೆ.
ಕಚೇರಿ ಮುಗಿಸಿ ಮನೆಗೆ ಮರಳುವ ಅವಸರದಲ್ಲಿದ್ದ ಸಾವಿರಾರು ಪ್ರಯಾಣಿಕರಿಗೆ ಈ ತಾಂತ್ರಿಕ ದೋಷದಿಂದಾಗಿ ತೊಂದರೆಯಾಗಿದೆ. ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ರೈಲು ಸ್ಥಗಿತಗೊಂಡಿದ್ದರಿಂದ, ಮಜೆಸ್ಟಿಕ್ ಮತ್ತು ಎಂ.ಜಿ. ರಸ್ತೆ ಕಡೆಗೆ ಸಂಚರಿಸುವ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ಇದರಿಂದಾಗಿ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚಿನ ಜನದಟ್ಟಣೆ ಕಂಡುಬಂದಿದ್ದು, ಪ್ರಯಾಣಿಕರು ಪ್ಲಾಟ್‌ಫಾರ್ಮ್‌ಗಳಲ್ಲಿ ದೀರ್ಘಕಾಲ ಕಾಯುವಂತಾಯಿತು. ಇನ್ನು ಈ ಬಗ್ಗೆ ಪ್ರಯಾಣಿಕರು ಏನು ಹೇಳಿದ್ದಾರೆ ನೋಡಿ.
