ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ! – Kannada News | Bengaluru: Man unalives 3 of his family members in Kamakshipalya

ಬೆಂಗಳೂರು, ಜುಲೈ 11: ನಗರದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಕೊಲೆ ಮಾಡಿ ಆರೋಪಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಕಳೆದ ಐದು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಪ್ರಶಾಂತ್ ಎಂಬಾತ, ಮೊದಲು ಕೋಣೆಯೊಳಗೆ ತನ್ನ ಮಾವನೊಂದಿಗೆ ಗಲಾಟೆ ನಡೆಸಿ ಆತನನ್ನು ಕೊಲೆ ಮಾಡಿದ್ದಾನೆ. ಶಬ್ದ ಕೇಳಿ ತಾಯಿ ಮತ್ತು ಅಜ್ಜಿ ಬಾಗಿಲು ತೆರೆದಾಗ, ಸಿಕ್ಕಿಬೀಳುವ ಭಯದಿಂದ ಅವರಿಬ್ಬರನ್ನೂ ಬಾಗಿಲಲ್ಲೇ ಕೊಂದಿದ್ದಾನೆ.

ಕೃತ್ಯದ ಬಳಿಕ ಆರೋಪಿ ಪರಾರಿಯಾಗಲು ಯತ್ನಿಸಿದ್ದನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ತಕ್ಷಣ ಮನೆಯ ಹೊರಗಿನಿಂದ ಡೋರ್ ಲಾಕ್ ಮಾಡಿ, 112 ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದರೆ ಸಿಕ್ಕಿಬೀಳುತ್ತೇನೆಂಬ ಭಯದಿಂದ ಪ್ರಶಾಂತ್ ಒಳಗಡೆಯೇ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಬಂದ ಬಳಿಕವೇ ಇಡೀ ಕೃತ್ಯ ಬೆಳಕಿಗೆ ಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *