ಕೊಲ್ಕತ್ತಾ, ಜುಲೈ 8: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಇಂದು ಕೊಲ್ಕತ್ತಾದಲ್ಲಿ ಪಕ್ಷದ ಪ್ರತಿಭಟನಾ ಮೆರವಣಿಗೆಯ ನೇತೃತ್ವ ವಹಿಸಿದ್ದ ಸಂದರ್ಭದಲ್ಲಿ ತೀವ್ರ ಆಕ್ರೋಶಗೊಂಡು, ತಮ್ಮದೇ ಪಕ್ಷದ ಕಾರ್ಯಕರ್ತರೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬರುಯಿಪುರ ಘಟನೆಯನ್ನು ಪ್ರತಿಭಟಿಸಲು ಮಮತಾ ಬ್ಯಾನರ್ಜಿ ಇಂದು ಬೀದಿಗಿಳಿದರು. ಆ ಮೆರವಣಿಗೆಯ ಸಮಯದಲ್ಲಿ ಅವರ ಮನೆಯೆದುರು ಅಸ್ತವ್ಯಸ್ತ ಪರಿಸ್ಥಿತಿ ಉಂಟಾಯಿತು. ಅಲ್ಲಿ, ಜನಸಂದಣಿಯನ್ನು ನಿಯಂತ್ರಿಸಲು ಮಮತಾ ಮೈಕ್ರೊಫೋನ್‌ನೊಂದಿಗೆ ಕೆಳಗೆ ಇಳಿದರು. ಆಗ ಅವರು ತಮ್ಮ ಮನೆಯ ಮುಂದೆ ಕಾರ್ಯಕರ್ತರನ್ನು ಚದುರಿಸುವಾಗ ಕೋಪಗೊಂಡು ಅವರಲ್ಲೊಬ್ಬನ ಕೆನ್ನೆಗೆ ಬಾರಿಸಿದ್ದಾರೆ. ಆದರೆ, ಅವರು ಅಷ್ಟು ಕೋಪಗೊಂಡಿದ್ದ ಯಾಕೆ ಎಂಬುದು ಸ್ಪಷ್ಟವಾಗಿಲ್ಲ.
ಇದನ್ನೂ ಓದಿ: ಟಿಎಂಸಿಯಲ್ಲಿ ಬಂಡಾಯ; ಫಿರ್ಹಾದ್ ಹಕೀಮ್ ಸೇರಿದಂತೆ 8 ಶಾಸಕರನ್ನು ಉಚ್ಛಾಟಿಸಿದ ಮಮತಾ ಬ್ಯಾನರ್ಜಿ
ಘಟನೆಯ ಹಿನ್ನೆಲೆಯೇನು?:
ಕೊಲ್ಕತ್ತಾದಲ್ಲಿ ಟಿಎಂಸಿ ಪಕ್ಷ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಮಮತಾ ಬ್ಯಾನರ್ಜಿ ಕೂಡ ಸಾಗುತ್ತಿದ್ದರು. ಈ ಸಂದರ್ಭದಲ್ಲಿ ಅವರ ಮನೆಯ ಸುತ್ತಲೂ ಭಾರಿ ಸಂಖ್ಯೆಯ ನಾಯಕರು, ಭದ್ರತಾ ಸಿಬ್ಬಂದಿ ಮತ್ತು ಪಕ್ಷದ ಕಾರ್ಯಕರ್ತರು ಜಮಾಯಿಸಿದ್ದರು. ಮೆರವಣಿಗೆ ಮುಂದುವರಿಯುತ್ತಿದ್ದಂತೆ, ಮಮತಾ ಬ್ಯಾನರ್ಜಿ ಅವರಿಗೆ ಹತ್ತಿರವಾಗಲು ಕಾರ್ಯಕರ್ತರು ಮುಗಿಬಿದ್ದರು. ಇದರಿಂದಾಗಿ ಅಲ್ಲಿ ತೀವ್ರ ನೂಕುನುಗ್ಗಲು ಉಂಟಾಯಿತು. ಆಗ ಕೋಪಗೊಂಡ ಮಮತಾ ಬ್ಯಾನರ್ಜಿ ತಮ್ಮದೇ ಪಕ್ಷದ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಸ್ಥಳದಲ್ಲಿದ್ದ ನಾಯಕರು ಮತ್ತು ಭದ್ರತಾ ಸಿಬ್ಬಂದಿ ಕೆಲಕಾಲ ಆತಂಕಕ್ಕೊಳಗಾದರು.
A frustrated Mamata Banerjee slaps her own party colleagues during TMC’s ‘protest march’ today: pic.twitter.com/Mav7HPyNvr
— Surajit Dasgupta (@surajitdasgupta) July 8, 2026
ಇದನ್ನೂ ಓದಿ: ನಾನಿನ್ನೂ ಬದುಕಿದ್ದೇನೆ ಎಂಬುದು ನೆನಪಿರಲಿ; ಟಿಎಂಸಿ ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ
ವಿಡಿಯೋ ವೈರಲ್:
ಮಮತಾ ಬ್ಯಾನರ್ಜಿ ಟಿಎಂಸಿ ಕಾರ್ಯಕರ್ತನ ಕೆನ್ನೆಗೆ ಹೊಡೆಯುತ್ತಿರುವ ದೃಶ್ಯಗಳು ಅಲ್ಲಿನ ಮಾಧ್ಯಮಗಳ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ಘಟನೆಯನ್ನು ಬಳಸಿಕೊಂಡು ಬಿಜೆಪಿ ಸೇರಿದಂತೆ ವಿರೋಧ ಪಕ್ಷಗಳು ಮಮತಾ ಬ್ಯಾನರ್ಜಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
