Headlines

ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ! – Kannada News | Massive Crocodile Spotted in Tungabhadra River; Panic Grips Honnali’s Sasvihalli Villagers

ದಾವಣಗೆರೆ, ಮೇ 09: ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿಯ ರಾಂಪುರ ಗ್ರಾಮದ ಬಳಿ ತುಂಗಭದ್ರ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ನದಿಯ ದಡದಲ್ಲಿ ಮೊಸಳೆ ಸುತ್ತಾಡುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ನಿತ್ಯ ಸ್ನಾನ ಹಾಗೂ ಬಟ್ಟೆ ಒಗೆಯಲು ನದಿಗೆ ಬರುವ ಗ್ರಾಮಸ್ಥರು ಮತ್ತು ಜಾನುವಾರುಗಳಿಗೆ ಈಗ ಪ್ರಾಣಭಯ ಶುರುವಾಗಿದೆ. ಇದೇ ಪ್ರದೇಶದಲ್ಲಿ ಮರಳು ಗಣಿಗಾರಿಕೆಯೂ ನಡೆಯುತ್ತಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಮೊಸಳೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *