ಬೆಂಗಳೂರು ಗ್ರಾಮಾಂತರ, ಜುಲೈ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಗ್ರಾಮದ ಬಳಿ ಕ್ಲೋರೈಡ್ ಕೆಮಿಕಲ್ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಕೆಮಿಕಲ್ ಸೋರಿಕೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅಪಘಾತದಿಂದ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಕಿಲೋಮೀಟರ್ವರೆಗೆ ವಾಹನ ಸಂಚಾರ ದಟ್ಟಣೆ ಉಂಟಾಯಿತು. ಮಾಹಿತಿ ತಿಳಿದು ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ.
ವರದಿ: ಮಂಜುನಾಥ್, ಟಿವಿ9, ನೆಲಮಂಗಲ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ