‘ತ್ರಿಷಾ ಮನೆಯಲ್ಲೇ ಇರಬೇಕು’; ಪಾರ್ಥಿಬನ್ ಹೇಳಿಕೆ ಬಗ್ಗೆ ಶುರುವಾಗಿದೆ ಚರ್ಚೆ

‘ತ್ರಿಷಾ ಮನೆಯಲ್ಲೇ ಇರಬೇಕು’; ಪಾರ್ಥಿಬನ್ ಹೇಳಿಕೆ ಬಗ್ಗೆ ಶುರುವಾಗಿದೆ ಚರ್ಚೆ

ಕಳೆದ ಕೆಲವು ವಾರಗಳಿಂದ ನಟ ದಳಪತಿ ವಿಜಯ್ ಹಾಗೂ ನಟಿ ತ್ರಿಷಾ (Trisha) ಅವರ ಹೆಸರು ಚರ್ಚೆಯಲ್ಲಿದೆ. ಅವರಿಬ್ಬರ ಸಂಬಂಧದ ಕಾರಣದಿಂದ ಸಂಗೀತಾ ಅವರು ವಿಜಯ್​​ಗೆ ವಿಚ್ಛೇದನ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡಿತು. ವಿವಾಹ ಆರತಕ್ಷತೆಯೊಂದಕ್ಕೆ ವಿಜಯ್ ಮತ್ತು ತ್ರಿಷಾ ಒಟ್ಟಾಗಿ ತೆರಳಿದ್ದರು. ಇದರ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಾದ ಬಳಿಕ ಚರ್ಚೆ ಶುರುವಾಗಿದೆ. ಈಗ ಈ ಬಗ್ಗೆ ನಟ ಹಾಗೂ ನಿರ್ದೇಶಕ ಪಾರ್ಥಿಬನ್ ಅವರು ಕುಹಕವಾಡಿದ್ದಾರೆ.

ದಳಪತಿ ವಿಜಯ್ ಹಾಗೂ ತ್ರಿಷಾ ಒಟ್ಟಾಗಿ ಸುತ್ತಾಟ ಮಾಡುತ್ತಿರುವ ವಿಷಯ ಸಾಕಷ್ಟು ಚರ್ಚೆಗೆ ಕಾರಣ ಆಗಿದೆ. ನಟಿಯ ಜೊತೆಗಿನ ಅಕ್ರಮ ಸಂಬಂಧದ ಕಾರಣಕ್ಕೆ ವಿಜಯ್ ಅವರಿಗೆ ವಿಚ್ಛೇದನ ನೀಡುತ್ತಿರುವುದಾಗಿ ಪತ್ನಿ ಸಂಗೀತಾ ಹೇಳಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ. ಈಗ ತ್ರಿಷಾ ಬಗ್ಗೆ ತಮಿಳು ನಟ ಪಾರ್ಥಿಬನ್ ಮಾಡಿದ ಕಾಮೆಂಟ್ ವೈರಲ್ ಆಗಿದೆ. ಅವರು ನಟಿಯನ್ನು ಟೀಕೆ ಮಾಡಿದ್ದಾರೆ. ಪಾರ್ಥಿಬನ್ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಅವರ ಜೊತೆ ತೆರೆ ಹಂಚಿಕೊಂಡ ನಟಿಯರ ಬಗ್ಗೆ ಪ್ರಶ್ನೆ ಮಾಡಲಾಯಿತು. ‘ಪೊನ್ನಿಯನ್ ಸೆಲ್ವನ್’ ಚಿತ್ರದಲ್ಲಿನ ಪಾತ್ರಗಳ ಬಗ್ಗೆ ತೋರಿಸಲಾಯಿತು. ಈ ವೇಳೆ ತ್ರಿಷಾ ಫೋಟೋ ಬಂತು.

‘ಕುಂದವೈ (ತ್ರಿಷಾ) ಕೆಲ ದಿನ ಮನೆ ಒಳಗೆ ಇರೋದು ಉತ್ತಮ. ಎಲ್ಲವನ್ನೂ ಮುಕ್ತವಾಗಿ ಮಾತನಾಡಲು ಸಾಧ್ಯವಿಲ್ಲ. ಎಲ್ಲಾ ಕವಿತೆಗಳನ್ನು ಆನಂದಿಸಲು ಸಾಧ್ಯವಿಲ್ಲ. ಕೆಲವು ಕವಿತೆಗಳನ್ನು ಮುಕ್ತವಾಗಿ ಓದಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ. ‘ಕುಂದವೈ ಹೊರಗೆ ಬಂದರೆ ಸಮಸ್ಯೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವಿಚ್ಛೇದನ, ತ್ರಿಷಾ ಬಗ್ಗೆ ಮೊದಲ ಬಾರಿ ಮಾತನಾಡಿದ ವಿಜಯ್

ಪಾರ್ಥಿಬನ್ ಅವರ ಭಾಷಣವನ್ನು ಕೆಲವರು ಹೊಗಳುತ್ತಿದ್ದಾರೆ. ಇನ್ನೂ ಕೆಲವರು ಪಾರ್ಥಿಬನ್ ಅವರು ಆಡಿದ ಮಾತುಗಳು ಸರಿ ಇಲ್ಲ ಎಂದು ನೇರವಾಗಿ ಹೇಳಿದ್ದಾರೆ. ‘ಪಾರ್ಥಿಬನ್ ಅವರು ಈಗಾಗಲೇ ಪತ್ನಿಯಿಂದ ವಿಚ್ಛೇದನ ಪಡೆದಿದ್ದಾರೆ. ಆದರೆ ಅವರು ತಮ್ಮ ಮಾಜಿ ಪತ್ನಿಯ ಬಗ್ಗೆ ಎಂದಿಗೂ ಸಾರ್ವಜನಿಕವಾಗಿ ಅವಹೇಳನಕಾರಿಯಾಗಿ ಮಾತನಾಡಿಲ್ಲ’ ಎಂದು ಕೆಲವರು ಪಾರ್ಥಿಬನ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಇನ್ನೂ ಕೆಲವರು ವಿಜಯ್ ಅವರನ್ನು ಟೀಕಿಸಿದ್ದಾರೆ. ‘ಹೆಂಡತಿಯ ಕಣ್ಣೀರು ಕೂಡ ವಿಜಯ್‌ಗೆ ಅಷ್ಟು ಮುಖ್ಯವಲ್ಲ ಎಂದು ಅವರು ವೇದಿಕೆಯ ಮೇಲೆ ಮಾತನಾಡುತ್ತಾರೆ. ಇದು ಸ್ವೀಕಾರಾರ್ಹವಲ್ಲ’ ಎಂದು ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *