ಥೈರಾಯ್ಡ್ ಸಮಸ್ಯೆ ಇದ್ಯಾ? ಚಿಂತೆ ಬೇಡ, ಈ ಸಲಹೆಗಳನ್ನು ಪಾಲಿಸಿ ಸಮಸ್ಯೆಯನ್ನು ನಿಯಂತ್ರಿಸಿ

ಥೈರಾಯ್ಡ್ ಸಮಸ್ಯೆ ಇದ್ಯಾ? ಚಿಂತೆ ಬೇಡ, ಈ ಸಲಹೆಗಳನ್ನು ಪಾಲಿಸಿ ಸಮಸ್ಯೆಯನ್ನು ನಿಯಂತ್ರಿಸಿ

ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ (Thyroid) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಈ ಸಮಸ್ಯೆಯಲ್ಲಿ ಆಹಾರ ಪದ್ಧತಿ ಬಹಳ ಮಹತ್ವದ್ದಾಗಿದ್ದು, ಕೆಟ್ಟ ಆಹಾರ ಸೇವನೆಯಿಂದ ಸಮಸ್ಯೆ ಇನ್ನಷ್ಟು ಗಂಭೀರವಾಗಬಹುದು. ನಿಮಗೆ ತಿಳಿರಿರಬಹುದು ಥೈರಾಯ್ಡ್ ಒಂದು ಗ್ರಂಥಿಯಾಗಿದ್ದು, ಇದು ಕುತ್ತಿಗೆಯ ಭಾಗದಲ್ಲಿ ಇರುತ್ತದೆ ಮತ್ತು ದೇಹದ ಮೆಟಾಬಾಲಿಸಮ್‌ನ್ನು ನಿಯಂತ್ರಿಸುತ್ತದೆ. ಇದು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ತೂಕ ಹೆಚ್ಚಾಗುವುದು ಅಥವಾ ಕಡಿಮೆಯಾಗುವುದು, ದಣಿವು, ಕೂದಲು ಉದುರುವುದು ಮುಂತಾದ ಸಮಸ್ಯೆಗಳು ಕಂಡುಬರಬಹುದು. ಜೀವನಶೈಲಿ, ಒತ್ತಡ, ಹಾರ್ಮೋನ್ ಬದಲಾವಣೆಗಳು ಮತ್ತು ಪೌಷ್ಟಿಕಾಂಶ ಕೊರತೆ ಇದಕ್ಕೆ ಕಾರಣವಾಗಬಹುದು. ಹಾಗಾಗಿ ಥೈರಾಯ್ಡ್ ಸಮಸ್ಯೆ ಬರಬಾರದು ಎಂದರೆ ಅಥವಾ ಈಗಾಗಲೇ ಈ ರೀತಿಯ ಸಮಸ್ಯೆಯಿಂದ ಬಳಲುತ್ತಿದ್ದರೆ ಅಂತವರು ತಮ್ಮ ಆಹಾರಕ್ರಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವುದು ಬಹಳ ಉತ್ತಮ. ಹಾಗಾದರೆ ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ರೀತಿಯ ಆಹಾರಗಳ ಸೇವನೆ ಮಾಡಬಾರದು, ಜೀವನಶೈಲಿಯಲ್ಲಿ ಯಾವ ರೀತಿ ಬದಲಾವಣೆ ಮಾಡಿಕೊಳ್ಳಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಆಹಾರಗಳ ಸೇವನೆ ಮಾಡಬಾರದು?

  • ಸೋಯಾ ಮತ್ತು ಸೋಯಾ ಉತ್ಪನ್ನಗಳು ಇವು ಥೈರಾಯ್ಡ್ ಹಾರ್ಮೋನ್ ಕಾರ್ಯಕ್ಕೆ ಅಡ್ಡಿಯಾಗಬಹುದು
  • ಕಚ್ಚಾ ತರಕಾರಿಗಳು (ಗೋಬಿ, ಬ್ರೋಕೊಲಿ) ಹೆಚ್ಚು ಪ್ರಮಾಣದಲ್ಲಿ ಸೇವನೆ ಮಾಡುವುದನ್ನು ತಪ್ಪಿಸಬೇಕು
  • ಪ್ರೊಸೆಸ್ಡ್ ಮತ್ತು ಜಂಕ್ ಫುಡ್ ಆರೋಗ್ಯಕ್ಕೆ ಹಾನಿಕಾರಕವಾಗಿದೆ
  • ಹೆಚ್ಚು ಉಪ್ಪು ಮತ್ತು ಸಕ್ಕರೆ ಇರುವ ಆಹಾರಗಳು
  • ಕೆಫೀನ್ ಮತ್ತು ಮದ್ಯಪಾನ ಹಾರ್ಮೋನ್ ಅಸಮತೋಲನಕ್ಕೆ ಕಾರಣವಾಗಬಹುದು

ಥೈರಾಯ್ಡ್ ನಿಯಂತ್ರಣಕ್ಕೆ ಯಾವ ರೀತಿಯ ಆಹಾರ ಸೇವನೆ ಮಾಡಬೇಕು?

  • ಐಯೋಡಿನ್ ಇರುವ ಆಹಾರಗಳು (ಉಪ್ಪು, ಹಾಲು ಉತ್ಪನ್ನಗಳು, ಮೀನು)
  • ಸೆಲೆನಿಯಂ ಮತ್ತು ಜಿಂಕ್ ಇರುವ ಆಹಾರಗಳು (ಡ್ರೈಫ್ರೂಟ್ಸ್, ಬೀಜಗಳು, ಸಂಪೂರ್ಣ ಧಾನ್ಯಗಳು)
  • ಹಸಿರು ತರಕಾರಿಗಳು ಮತ್ತು ಹಣ್ಣುಗಳು
  • ಪ್ರೋಟೀನ್ ಆಹಾರಗಳು (ಬೇಳೆ, ಮೊಟ್ಟೆ, ಪನೀರ್)
  • ಸಾಕಷ್ಟು ನೀರು ಕುಡಿಯುವುದು ಮತ್ತು ಸಮತೋಲನ ಆಹಾರ ಸೇವಿಸುವುದು ಕೂಡ ಮುಖ್ಯವಾಗುತ್ತದೆ.

ಇದನ್ನೂ ಓದಿ: ಈ ಮೂರು ಲಕ್ಷಣಗಳು ಕಂಡು ಬಂದ್ರೆ ನಿರ್ಲಕ್ಷ್ಯ ಮಾಡಬೇಡಿ; ಇದು ಥೈರಾಯ್ಡ್ ಸಮಸ್ಯೆ ಬರುವ ಮುನ್ಸೂಚನೆಯಾಗಿರಬಹುದು

ಜೀವನಶೈಲಿ ಯಾವ ರೀತಿಯ ಬದಲಾವಣೆ ಮಾಡಿಕೊಳ್ಳಬೇಕು?

  • ನಿಯಮಿತ ವ್ಯಾಯಾಮ ಮತ್ತು ಯೋಗ ಮಾಡುವುದು
  • ಒತ್ತಡವನ್ನು ಕಡಿಮೆ ಮಾಡಿಕೊಳ್ಳುವುದು
  • ಸಮಯಕ್ಕೆ ಸರಿಯಾಗಿ ಔಷಧಿ ತೆಗೆದುಕೊಳ್ಳುವುದು
  • ಸಾಕಷ್ಟು ನಿದ್ರೆ ಮಾಡುವುದು
  • ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು

ಒಟ್ಟಿನಲ್ಲಿ, ಸರಿಯಾದ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯಿಂದ ಥೈರಾಯ್ಡ್ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು. ಅದರ ಜೊತೆಗೆ ತಜ್ಞರ ಸಲಹೆಯನ್ನು ಪಾಲಿಸುವುದು ಕೂಡ ಬಹಳ ಮುಖ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *