Headlines

ದರ್ಶನ್​​ಗೆ ಶಾಕ್ ಮೇಲೆ ಶಾಕ್; ಪ್ರದೋಷ್ ಬಳಿಕ ಮತ್ತಿಬ್ಬರು ಮಾಫಿ ಸಾಕ್ಷಿ ಅರ್ಜಿ – Kannada News | Renukaswamy Murder Case: Shock to Darshan as Two More Accused Seek to Become Approvers

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಗ್ಯಾಂಗ್‌ಗೆ ಶಾಕ್​ ಮೇಲೆ ಶಾಕ್ ಎದುರಾಗುತ್ತಿದೆ. ಪ್ರಕರಣದ ಎ14 ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದೆ. ಇದರ ನಡುವೆಯೇ ಮತ್ತಿಬ್ಬರು ಆರೋಪಿಗಳನ್ನು ಮಾಫಿ ಸಾಕ್ಷಿಯನ್ನಾಗಿ ಮಾಡುವಂತೆ ಅವರ ಪರ ವಕೀಲರು ಕೋರ್ಟ್‌ಗೆ ಮನವಿ ಸಲ್ಲಿಸಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಪ್ರದೋಷ್ ಜೊತೆ ಮತ್ತಿಬ್ಬರು ಮಾಫಿ ಸಾಕ್ಷಿ?

ಪ್ರಕರಣದ ಎ8 ಆರೋಪಿ ರವಿಶಂಕರ್ ಹಾಗೂ ಎ10 ಆರೋಪಿ ವಿನಯ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ತಮ್ಮ ಕಕ್ಷಿದಾರರನ್ನೂ ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಕೋರಿದ್ದಾರೆ. ಈ ಕುರಿತು ಮಧ್ಯಾಹ್ನ ಪ್ರತ್ಯೇಕ ಅರ್ಜಿ ಸಲ್ಲಿಸುವುದಾಗಿ ವಕೀಲರು ಪೀಠಕ್ಕೆ ತಿಳಿಸಿದ್ದಾರೆ. ರವಿಶಂಕರ್ ಹಾಗೂ ವಿನಯ್ ಸದ್ಯ ಜಾಮೀನು ಪಡೆದು ಹೊರಗಿದ್ದಾರೆ.

ಪ್ರದೋಷ್ ಪರ ವಕೀಲರ ಆಕ್ಷೇಪ

ಮತ್ತಿಬ್ಬರು ಆರೋಪಿಗಳ ಮನವಿಯನ್ನು ತಮ್ಮ ಅರ್ಜಿಯೊಂದಿಗೆ ಸೇರಿಸಬಾರದು ಎಂದು ಎ14 ಪ್ರದೋಷ್ ಪರ ವಕೀಲ ದಿವಾಕರ್ ಸೆಷನ್ಸ್ ಕೋರ್ಟ್‌ಗೆ ಮನವಿ ಮಾಡಿದರು. ಮೊದಲು ತಮ್ಮ ಕಕ್ಷಿದಾರ ಪ್ರದೋಷ್ ಅವರ ಹೇಳಿಕೆಯನ್ನು ನ್ಯಾಯಾಲಯ ದಾಖಲಿಸಿಕೊಳ್ಳಲಿ, ಆ ನಂತರ ಪ್ರಾಸಿಕ್ಯೂಷನ್ ಈ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಲಿ ಎಂದು ಅವರು ಪ್ರತಿಪಾದಿಸಿದರು.

ವಕೀಲರ ವಾದ-ಪ್ರತಿವಾದಗಳನ್ನು ಆಲಿಸಿದ 59ನೇ ಸೆಷನ್ಸ್ ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ಕೆಲಕಾಲ ಮುಂದೂಡಿದೆ. ಪ್ರದೋಷ್ ಈಗಾಗಲೇ ಮಾಫಿ ಸಾಕ್ಷಿಯಾಗಲು ಒಪ್ಪಿಕೊಂಡಿದ್ದು, ಈಗ ಮತ್ತಿಬ್ಬರು ಆರೋಪಿಗಳು ಅದೇ ಹಾದಿ ತುಳಿಯಲು ಮುಂದಾಗಿರುವುದು ದರ್ಶನ್ ಪಡೆಗೆ ನುಂಗಲಾರದ ತೂತಾಗಿ ಪರಿಣಮಿಸಿದೆ.

ಇದನ್ನೂ ಓದಿ: ದರ್ಶನ್​​ಗೆ ಶಾಕ್: ರೇಣುಕಾಸ್ವಾಮಿ ಕೇಸ್​​ನಲ್ಲಿ ಮಾಫಿ ಸಾಕ್ಷಿ ಮಾಡಿ; ಕೋರ್ಟ್​​ಗೆ ಎ14 ಪ್ರದೋಶ್ ಮನವಿ

ಪ್ರದೋಷ್​ ಅರ್ಜಿಯಲ್ಲಿ ಹೇಳಿದ್ದೇನು?

ಪ್ರದೋಷ್ ಪರ ವಕೀಲರು 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಇರುವ ಕೊಠಡಿ ಬಿಟ್ಟು ತಮ್ಮನ್ನು ಪ್ರತ್ಯೇಕ ಜೈಲು ಕೊಠಡಿಯಿಂದ ವಿಚಾರಣೆಗೆ ಹಾಜರುಪಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ದರ್ಶನ್ ಬೆದರಿಕೆ ಹಾಕುವುದು ಅಥವಾ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ಹೀಗಾಗಿ, ಈ ಮನವಿ ಸಲ್ಲಿಕೆಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *