ಎಸಿಪಿ ಚಂದನ್ ಹಾಗೂ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ಅಮಾನತಿಗೆ ಆಗ್ರಹ ಕೇಳಿ ಬಂದಿದೆ. ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಇವರು ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 11ರಂದು ಬುಧವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟದಿಂದ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ನಟರಾಜ್ ಬೊಮ್ಮಸಂದ್ರ ಮಾಹಿತಿ ನೀಡಿದ್ದಾರೆ. ಅವರು ನೀಡಿದ ವಿವರಣೆ ಮೇಲಿನ ವಿಡಿಯೋದಲ್ಲಿ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.