ಯಾದಗಿರಿ, ಜೂನ್ 19: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗೂರನೂರು ಗ್ರಾಮದಲ್ಲಿ ಮೇಲ್ವರ್ಗದವರಿಂದ ದಲಿತರ ಮೇಲೆ ದಬ್ಬಾಳಿಕೆ ಆರೋಪ ಕೇಳಿಬಂದಿದೆ. ದಲಿತ ಕುಟುಂಬಗಳು ಜಮೀನುಗಳಿಗೆ ಹೋಗುವ ದಾರಿಯನ್ನು ಮೇಲ್ವರ್ಗದ ಎರಡು ಕುಟುಂಬಗಳು ಬಂದ್ ಮಾಡಿದ್ದು, ಕಳೆದ ಎರಡು ವರ್ಷಗಳಿಂದ ಇದೇ ಸ್ಥಿತಿ ಇಲ್ಲಿದೆ. ಈ ಸಂಬಂಧ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಲಾಗಿದ್ದು, ಇದರಿಂದ ಬೇಸತ್ತ ಗ್ರಾಮಸ್ಥರು, ದಲಿತರ ಜೊತೆ ಕೈಜೋಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ತಮ್ಮ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದು, ರಸ್ತೆಗಳು ಬಂದ್ ಆಗಿರುವ ಕಾರಣ ಗ್ರಾಮದ ಮಕ್ಕಳು ಶಾಲೆಗೆ ಹೋಗಲು ಜಮೀನುಗಳ ಮೂಲಕ ಸಂಚರಿಸಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.