ದಾವಣಗೆರೆ, ಜನವರಿ 18: ದಾವಣಗೆರೆಯ ಆನಗೋಡ ಬಳಿ ಇರುವ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ ನಾಲ್ಕು ಚುಕ್ಕೆ ಜಿಂಕೆಗಳು ಸಾವನ್ನಪ್ಪಿವೆ. ಹೆಮರಾಜಿಕ್ ಸೆಪ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಜಿಂಕೆಗಳು ಸಾವನ್ನಪ್ಪಿರುವಂತಹ ಶಂಕೆ ವ್ಯಕ್ತವಾಗಿದೆ. ಸದ್ಯ ಉಳಿದ ಪ್ರಾಣಿಗಳ ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ ಮಾಹಿತಿ ನೀಡಿದ್ದಾರೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.
