ದಾವಣಗೆರೆ, ಮೇ 05: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಜಯಗಳಿಸಿದೆ. ಆದರೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶ ಕಾಂಗ್ರೆಸ್ಗೆ ಆತಂಕ ಮೂಡಿಸಿದೆ. ಕಾಂಗ್ರೆಸ್ ಗೆದ್ದಿದ್ದರೂ, ವಿಜಯದ ಅಂತರ ಬಹಳ ಕಡಿಮೆಯಾಗಿದೆ. ಇದು ಮುಸ್ಲಿಂ ಮತದಾರರು ಕಾಂಗ್ರೆಸ್ನಿಂದ ದೂರ ಸರಿದಿರುವುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಎಸ್ಡಿಪಿಐ ಅಭ್ಯರ್ಥಿಗೆ ದಾಖಲೆಯ ಸುಮಾರು 19,000 ಮತಗಳು ಬಂದಿದ್ದು, ಇತರೆ ಮುಸ್ಲಿಂ ಅಭ್ಯರ್ಥಿಗಳಿಗೆ 2-3 ಸಾವಿರ ಮತಗಳು ಲಭಿಸಿವೆ. ಈ ಬೆಳವಣಿಗೆಯು ಮುಂದಿನ ದಿನಗಳಲ್ಲಿ 40-50 ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ದೊಡ್ಡ ಮಟ್ಟದ ಹಾನಿಯನ್ನುಂಟು ಮಾಡಬಹುದು ಎಂದು ವಿಶ್ಲೇಷಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಅಸಮಾಧಾನವನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎನ್ನಲಾಗ್ತಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.