Headlines

ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಒತ್ತಡದ ಕಾರ್ಯವನ್ನು ನಿರ್ವಹಿಸಲು ಅಸಾಧ್ಯ – Kannada News | Horoscope May 05 Tuesday 2026; Dina Rashi Bhavishya Today, Checkout the details here

ಮೇಷ ರಾಶಿ:

ನಿಜವಾದ ಯಶಸ್ಸಿಗೆ ಅಡ್ಡದಾರಿಯನ್ನು ಹುಡುಕಿದರೆ ಪ್ರಯೋಜನವಾಗದು. ಯಾರದೋ ಸುದ್ದಿಯನ್ನು ಮತ್ಯಾರಿಗೋ ಹೇಳುತ್ತ ಸಮಯವನ್ನು ಕಳೆಯುವಿರಿ. ಇದು ನಿಮಗೆ ಬೇಸರ ತರಿಸುವ ಕೆಲಸವಾಗಿರುತ್ತದೆ. ಹೊಸ ಯೋಜನೆಗಳು ಸಿಗಲಿದೆ. ಸಂಬಂಧಗಳು ಸುಧಾರಿಸುವ ಹಂತಕ್ಕೆ ಹೋಗಲಿವೆ. ಪ್ರಭಾವೀ ವ್ಯಕ್ತಿಗಳ ಒತ್ತಡಕ್ಕೆ ಕೊನೆಗೂ ಶರಣಾಗಬೇಕಾಗುವುದು. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ.

ವೃಷಭ ರಾಶಿ:

ಅತಿಯಾದ ದೇಹಾಲಸ್ಯದಿಂದ ಕಾರ್ಯಗಳು ಸಮಯಕ್ಕೆ ಸರಿಯಾಗಿ ಆಗದೇ ವಿಳಂಬವಾಗಲಿದೆ. ನಿಮ್ಮ‌ಅಜ್ಞಾನವನ್ನು ನೀವೇ ಪ್ರದರ್ಶಿಸುವಿರಿ‌. ನೀವು ನಿರ್ಮಿಸಿಕೊಂಡ ನೂತನ ಗೃಹದಲ್ಲಿ ವಾಸವು ಆರಂಭವಾಗಲಿದೆ. ಸ್ವಯಂ ಕೃತ ಅಪರಾಧವೇ ನಿಮಗೆ ಮುಳುವಾಗಬಹುದು. ಆಕಸ್ಮಿಕ ಲಾಭದ ನಿರೀಕ್ಷೆಯಲ್ಲಿ ನೀವು ಇರುವಿರಿ. ದಾಂಪತ್ಯದಲ್ಲಿ ಕೆಲವು ಕಹಿ ಮಾತುಗಳು ಬರಬಹುದು. ನೀವು ಇಂದು ಕೈಲಾಗದೇ ಇರುವ ಅಬಲರು.

ಮಿಥುನ ರಾಶಿ :

ನಿಮಗೆ ಸುಳ್ಳನ್ನು ಆಡುವವರು ಎನ್ನುವ ಹಣೆಪಟ್ಟಿ ಬೀಳಲಿದೆ. ನಿಮ್ಮ ಮಾತಿಗೆ ಬಿಡಿಗಾಸಿನಷ್ಟೂ ಬೆಲೆ ಇಲ್ಲದೇ ಕಡಿಮೆಯಾಗಬಹುದು. ನೀರಿಗೆ ಸಂಬಂಧಿಸಿದ ಉದ್ಯೋಗಾವಕಾಶಗಳು ಹೆಚ್ಚು ಸಿಗಬಹುದು. ಮನಸ್ಸಿನ ದುಗುಡವನ್ನು ಶಾಂತಮಾಡಿಕೊಳ್ಳುವಿರಿ. ಕೋಪವನ್ನು ಬಲವಂತವಾಗಿ ತಡೆಯುವಿರಿ. ಊರಿನಿಂದ ಹೊರಹೋಗುವ ಸಾಧ್ಯತೆ ಇದೆ. ಕಲಾವಿದರು ಹೆಚ್ಚಿನ ಪ್ರಶಂಸೆಯನ್ನು ಗಳಿಸುವರು.

ಕರ್ಕಾಟಕ ರಾಶಿ:

ಪ್ರಭಾವೀ ವ್ಯಕ್ತಿತ್ವವನ್ನು ಜನಕ್ಕೆ ತಿಳಿಸುವಿರಿ. ನೀವಿಡುವ ಹೆಜ್ಜೆಯು ಗುರುತಾಗಲಿದೆ. ಎಂತಹ ಹೆಜ್ಜೆಗಳನ್ನು ಇಡಬೇಕು ಎನ್ನುವುದನ್ನು ತೀರ್ಮಾನಿಸಿಕೊಳ್ಳಿ. ವಿರೋಧಿಗಳ ಮಾತಿನ ಭರದಲ್ಲಿ ನಿಮ್ಮ ಮಾತು ಗೌಣವಾಗಬಹುದು. ನಿಮ್ಮನ್ನು ನಿಂದಿಸುವವರನ್ನು ನೀವು ದೂರವಿರಿಸುವಿರಿ. ಆಡಿದ ಮಾತನ್ನು ತಿರುಚುವ ಕೆಲಸ ಮಾಡುವುದು ಬೇಡ. ಬಂದಿದ್ದನ್ನು ಬಂದಂತೆ ಸ್ವೀಕರಿಸಲು ಕಷ್ಟವಾಗದು. ಮನೆಯಲ್ಲಿ ಆಸ್ತಿಯ ವಿಚಾರವಾಗಿ ಸಣ್ಣ ಬಿರುಸಿನ ಮಾತುಗಳು ಕೇಳಿಬರಬಹುದು.

ಸಿಂಹ ರಾಶಿ:

ಉದ್ವೇಗಕ್ಕೆ ಒಳಗಾಗದೇ ತಾಳ್ಮೆಯಿಂದ ವರ್ತಿಸುವುದು ಉಚಿತ. ಕಬ್ಬಿಣಕ್ಕೆ ಸಂಬಂಧಿಸಿದ ಕಾರ್ಯದಲ್ಲಿ ಹೆಚ್ಚು ಒತ್ತಡ. ದಾಂಪತ್ಯದಲ್ಲಿ ಮಾತಿನ ಸಣ್ಣ ಬಿಸಿ ಉಂಟಾಗಬಹುದು. ಮನಸ್ಸಿನಲ್ಲಿ ಒಡಕುಗಳು ಮೂಡಬಹುದು. ಆದಷ್ಟು ಮುಂದುವರಿಯದೇ ನಿಲ್ಲಿಸಲು ಪ್ರಯತ್ನಿಸಿ. ಮುಂದೆ ಅದು ವಿಚ್ಛೇದನಕ್ಕೆ ಕಾರಣವಾಗಬಹುದು. ಆರೋಗ್ಯವು ಕೆಡಲಿದ್ದು ಹತ್ತಾರು ಆಲೋಚನೆಗಳು ಬರಬಹುದು. ನಿಮ್ಮನ್ನು ಭಾವನಾತ್ಮಕವಾಗಿ ಕಟ್ಟಿಹಾಕಬಹುದು.

ಕನ್ಯಾ ರಾಶಿ:

ಕೆಲವರು ನಿಮ್ಮೆದುರು ಮಾತನಾಡದೇ ಹಿಂಬದಿಯಿಂದ ಮಾತನಾಡಲಿದ್ದಾರೆ. ಗುರುವಿನ ಅನುಗ್ರಹದಿಂದ ಉದ್ಯಮಕ್ಕೆ ಬಲ ಸಿಗಲಿದೆ. ಕೃಷಿಯ ಬಗ್ಗೆ ಆಸಕ್ತಿ ಇರುವ ನೀವು ಕೃಷಿಯನ್ನು ಮಾಡಿ ಸ್ವಲ್ಪಮಟ್ಟಿನ ಲಾಭವನ್ನು ಗಳಿಸುವಿರಿ. ತಂದೆಯು ನಿಮ್ಮ ಕೆಲಸಕ್ಕೆ ಧನಸಹಾಯವನ್ನು ಮಾಡಲಿದ್ದಾರೆ. ಕೆಲವರ ಸಹವಾಸದಿಂದ ನಿಮ್ಮ ದಿಕ್ಕು ತಪ್ಪಬಹುದು. ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಉತ್ತಮಸ್ಥಾನವು ಸಿಗಲಿದೆ. ಅಲ್ಪಾವಧಿಯಲ್ಲಿ ಅಧಿಕ ಲಾಭಕ್ಕಾಗಿ ಹೂಡಿಕೆ ಮಾಡುವಿರಿ.

ತುಲಾ ರಾಶಿ:

ಒತ್ತಡಗಳನ್ನು ನಿವಾರಿಸುವ ಉಪಾಯವು ಕರಗತವಾಗಿದ್ದು ಅನಾಯಾಸದಿಂದ ಕಾರ್ಯಗಳನ್ನು ಮಾಡಿ ಮುಗಿಸುವಿರಿ. ಮಾತುಗಾರಿಕೆಯಿಂದ ಆಗದ ಕೆಲಸವನ್ನೂ ಆಗಿಸಿಕೊಳ್ಳುವಿರಿ. ಹೊಸ ಕೆಲಸವನ್ನು ಆರಂಭಿಸುವವರು ಆರಂಭಿಸಲು ಯೋಗ್ಯವಾದ ಸಮಯವಾಗಿದೆ. ಯಾರಿಂದಲೋ ಪ್ರೇರಿತರಾಗಿ ಆಸ್ತಿಯನ್ನು ಪಡೆಯುವ ಹುನ್ನಾರ ನಡೆಸುವಿರಿ. ಇಂದು ನಿಮ್ಮ ಮಾತಿನ ಆರಂಭವೇ ನೀವು ಎಂತಹವರು ಎನ್ನುವುದನ್ನು ತಿಳಿಸುತ್ತದೆ.

ವೃಶ್ಚಿಕ ರಾಶಿ:

ನೀವು ಬಹಳ ದಿನಗಳಿಂದ ಮಾಡುತ್ತಿರುವ ಕಾರ್ಯಗಳು ಮುಂದೆ ಹೋಗುತ್ತಿದ್ದು ಇಂದು ಅದನ್ನು ಪೂರೈಸುವಿರಿ. ಇಂದು ಮನಸ್ಸು ನಿರಾಳವಾಗಿ ಯಾವದೇ ಒತ್ತಡಕ್ಕೆ ಸಿಲುಕದೇ ಇರುವುದು. ನಿಮ್ಮ ಯಾರಾದರೂ ಕೆಣಕಬಹುದು. ಸರ್ಕಾರದ ಕಾರ್ಯದಲ್ಲಿ ಸರಿಯಾದ ಮಾಹಿತಿ ಕೊರತೆ. ದುರಭ್ಯಾಸವು ಮನೆಯವರಿಗೆ ಗೊತ್ತಾಗಲಿದೆ. ನೀವು ಹೇಳಿದ ಕೆಲಸವೂ ವೇಗವಾಗಿ ಮುಗಿಯದು. ಸ್ನೇಹಿತರಿಗೆ ಬೇಸರವಾಗಬಾರದೆಂದು ಅವರ ಜೊತೆ ಸಮಸ್ಯೆ ಕಳೆಯುವಿರಿ.

ಧನು ರಾಶಿ:

ಇಂದು ನಿಮ್ಮ ಅನಗತ್ಯ ಕಾರ್ಯಗಳ ಪಟ್ಟಿಯೇ ದೊಡ್ಡದಾಗುವುದು. ಅವಶ್ಯಕತೆಗಳನ್ನು ಮಾತ್ರ ನೀಗಿಸಿಕೊಳ್ಳುವ ಪ್ರಯತ್ನವನ್ನು ಮಾಡಿ. ಯಾವುದೇ ಸಾಹಸಕ್ಕೆ ಕೈ ಹಾಕಲು ಹೋಗುವುದು ಬೇಡ‌. ವಿದೇಶದ ವಿದ್ಯಾಭ್ಯಾಸಕ್ಕೆ ಅವಕಾಶ ಸಿಗಲಿದೆ. ನಿಮಗೆ ಭವಿಷ್ಯದ ಚಿಂತೆ‌ ಇರಲಿದೆ. ಮಕ್ಕಳ ಜೊತೆ ಕೆಲವು ಸಮಯವನ್ನು ಕಳೆಯುವಿರಿ. ವೈದ್ಯಕೀಯ ವೃತ್ತಿಯಲ್ಲಿ ತುರ್ತು‌ ಕಾರ್ಯಗಳು ಬರುವುದು. ಪ್ರೇಮಕ್ಕಾಗಿ ಹೆಚ್ಚು ಖರ್ಚನ್ನು ಮಾಡಬೇಕಾದೀತು.

ಮಕರ ರಾಶಿ:

ಕಛೇರಿಯಲ್ಲಿ ನಿಮ್ಮನ್ನು ಹಿಮ್ಮೆಟ್ಟಿಸಲು ಕಾಯುತ್ತಿರುವರು. ಅವರಿಗೆ ನೀವು ಆಹಾರವಾಗಲಿದ್ದೀರಿ. ಇಂದು ನಿಮ್ಮ ಆತ್ಮಸಾಕ್ಷಿಯಂತೆ ನಡೆದುಕೊಳ್ಳುವಿರಿ. ಎದೆಗುಂದುವ ಸ್ಥಿತಿ ಇಂದು ಬರಬಹುದು. ನಿಮ್ಮ ಅನಂತರ ಕೆಲಸ ಮಾಡುವವರಿಂದ ನಿಮಗೆ ಕೆಲವು ಮಾತುಗಳು ಸಿಗಬಹುದು. ಯಾವ ಬಲವನ್ನು ನಂಬದೇ ಸ್ವಪ್ರಯತ್ನದಿಂದ ಎಲ್ಲವನ್ನೂ ಮಾಡಲು ಬಯಸುವಿರಿ. ಮುರಿದ ಸಂಬಂಧಗಳು ಎಷ್ಟೇ ಆದರೂ ಸರಿಯಾಗಿ ಕೂಡಿಕೊಳ್ಳುವುದು ಕಷ್ಟವಾದೀತು.

ಕುಂಭ ರಾಶಿ:

ನಿಮಗೆ ಸಿಗಬೇಕಾದ ಜವಾಬ್ದಾರಿ ಮತ್ತೊಬ್ಬರಿಗೆ ಸಿಗಲಿದೆ. ದೂರದ ಊರಿಗೆ ವೈಯಕ್ತಿಕ ಕಾರ್ಯದ ನಿಮಿತ್ತ ಪ್ರಯಾಣ ಮಾಡಲಿದ್ದೀರಿ. ಸ್ನೇಹಿತ ಮಾತುಗಳು ನಿಮಗೆ ಕಸಿವಿಸಿ ವಾತಾವರಣವನ್ನು ಉಂಟುಮಾಡಲಿದೆ. ಉನ್ನತ ವಿದ್ಯಾಭ್ಯಾಸವನ್ನು ಮಾಡುವವರಿಗೆ ವಿದೇಶಗಳಲ್ಲಿ ಅವಕಾಶವು ದೊರೆಯಲಿದೆ. ರಾಜಕೀಯದಲ್ಲಿ ಬದಲಾವಣೆಯನ್ನು ತರಿಸುವುದು. ಮಕ್ಕಳ ವಿದ್ಯಾಭ್ಯಾಸದ ಚಿಂತೆ ಇರಲಿದೆ.

ಮೀನ ರಾಶಿ:

ಖುಷಿಯಾಗಿರಲು ಕೆಲವು ಸಂಗತಿಗಳು ನಿಮ್ಮ ಪಾಲಿಗೆ ಬರಲಿವೆ. ವಿನಾಕಾರಣ ಸಂಗಾತಿಯ ನಡುವೆ ಸಣ್ಣ ಕಲಹಗಳು ಹುಟ್ಟಿಕೊಳ್ಳಬಹುದು. ಅನಿವಾರ್ಯವಾಗಿ ಹೊರಗಿನ ತಿಂಡಿಯನ್ನು ತಿನ್ನಬೇಕಾದೀತು. ಉದರಕ್ಕೆ ಸಂಬಂಧಿಸಿದ ರೋಗವು ಬಂದು ಆರೋಗ್ಯವು ಕೆಡುವುದು. ನಿಮಗೆ ಕೆಲವು ಶುಭ ಶಕುನಗಳು ಕಾಣಿಸಿಕೊಳ್ಳಲಿದ್ದು ಅದರಂತೆ ನಿಮ್ಮ ನಡಿಗೆ ಇರಲಿ. ಭೂಮಿಯ ವ್ಯಾಪಾರದಲ್ಲಿ ಜಯವಾಗಲಿದೆ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಮೂಲಾ, ಯೋಗ : ಶಿವ, ಕರಣ : ಬವ, ಸೂರ್ಯೋದಯ – 06 – 01 am, ಸೂರ್ಯಾಸ್ತ – 06 – 40 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:31 – 17:06, ಯಮಗಂಡ ಕಾಲ 09:11 – 10:46, ಗುಳಿಕ ಕಾಲ 12:21 – 13:56

-ಲೋಹಿತ ಹೆಬ್ಬಾರ್ – 8762924271 (what’s app only)

Source link

Leave a Reply

Your email address will not be published. Required fields are marked *