ಮಡಿಕೇರಿ, ಮೇ 19: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ನಡುವೆ ನಡೆದ ಕಾಳಗದ ಘಟನೆಯಿಂದಾಗಿ ಚೆನ್ನೈ ಮೂಲದ ಮಹಿಳೆ ತುಳಸಿ ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಸದ್ಯಬ ಆನೆ ಶಿಬಿರವನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗಿದೆ. ಪ್ರವಾಸಿಗರ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಘಟನೆಯಲ್ಲಿ ದಾಳಿಗೊಳಗಾದ ಮಾರ್ತಾಂಡ ಆನೆ ಚೇತರಿಸಿಕೊಳ್ಳುತ್ತಿದೆ. ಮಾರ್ತಾಂಡ ಮತ್ತು ಕಂಜನ್ ಆನೆಗಳ ನಡುವೆ ನಡೆದ ಕಾಳಗದ ವೇಳೆ ಮಹಿಳೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದರು. ದುಬಾರೆ ಆನೆ ಶಿಬಿರದಲ್ಲಿ ಆನೆಗಳೊಂದಿಗೆ ಹತ್ತಿರದಿಂದ ಒಡನಾಡಲು ಅವಕಾಶವಿದ್ದು, ಇದೇ ಕಾರಣದಿಂದ ಮಹಿಳೆಯ ಪ್ರಾಣಕ್ಕೆ ಅಪಾಯ ಎದುರಾಗಿತ್ತು. ಪ್ರಸ್ತುತ ಶಿಬಿರವು ನಿರ್ಜನವಾಗಿದ್ದು, ಸುತ್ತಮುತ್ತಲಿನ ಅಂಗಡಿ ಮುಂಗಟ್ಟುಗಳು ಸಹ ಬಂದ್ ಆಗಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
